ಕಲಬುರಗಿ | ದಲಿತ ಬಾಲಕಿಯರ ಅತ್ಯಾಚಾರ ಪ್ರಕರಣ; ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

Date:

ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್‌ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯ ಯುವಘಟಕ ರಾಜ್ಯಧ್ಯಕ್ಷ ಗುರುರಾಜ ಭಂಡಾರಿ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ ದಲಿತ ಅಪ್ರಾಪ್ತೆಯರ ಮೇಲೆ, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರ ನಡೆಯುತ್ತಲೇ ಇವೆ. ಕರ್ನಾಟಕದಲ್ಲಿ ಗೃಹ ಮಂತ್ರಿ, ಸಮಾಜ ಕಲ್ಯಾಣ ಮಂತ್ರಿಗಳು ಸೇರಿದಂತೆ ರಾಜ್ಯದಲ್ಲಿ ದಲಿತ ಮಂತ್ರಿಗಳು ಅಧಿಕಾರದಲ್ಲಿ ಇದ್ದರೂ ಕೂಡ ದಲಿತರಿಗೆ ರಕ್ಷಣೆಯಿಲ್ಲ. ಇದಕ್ಕೆ ಉದಾಹರಣೆಯಾಗಿ ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ನಡೆದ ಘಟನೆಗಳಿಗೆ ದಲಿತ ಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ತಿಳಿದರು.

“ಕಳೆದ ಇಪ್ಪತ್ತು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ, ಕೊಡೇಕಲ್ ಗ್ರಾಮದಲ್ಲಿ ಮಾದಿಗ ಸಮುದಾಯದ 15 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವಾಗಿ, ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿ ಸುಮಾರು 20 ದಿನ ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅತ್ಯಾಚಾರ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಹಾಗೂ ಆ ಗ್ರಾಮಗಳಲ್ಲಿ ಮಾದಿಗ ಸಮುದಾಯದ ಕುಟುಂಬಗಳನ್ನು ಬಹಿಷ್ಕಾರ ಮಾಡಿದವರನ್ನು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಂಬಂದಪಟ್ಟ ಠಾಣೆಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಖಾಜಕೋಟನೂರ್ ಶಾಲೆಗಿಲ್ಲ ತಡೆಗೋಡೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಎಂಆರ್‌ಪಿಎಸ್) ರಾಜ್ಯ ಯುವ ಸೇನೆ ರಾಜ್ಯಾಧ್ಯಕ್ಷ ಗುರುರಾಜ ಭಂಡಾರಿ ಹಾಗೂ ರಾಜ್ಯ ಕಾರ್ಯದರ್ಶಿ ರಾಜು ಹದನೂರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ದ ಸೆಪ್ಟೆಂಬರ್‌ 30ರಂದು ಯಾದಗಿರಿ ಬಂದ್‌ಗೆ ಕರೆಕೊಟ್ಟು ಹೋರಾಟ ಹಮ್ಮಿಕೊಳ್ಳಲಾಗಿದೆ.‌ ಆದರಿಂದ ಕಲಬುರಗಿ ಜಿಲ್ಲೆಯ ಮಾದಿಗ ದಂಡೋರ ಹಾಗೂ ಮಾದಿಗಪರ ಸಂಘಟನೆಗಳು ಹೋರಾಟಗಾರರು, ಬುದ್ದಿಜೀವಿಗಳು, ಯುವಕರು, ಹಿತಚಿಂತಕರು ʼಯಾದಗಿರ ಬಂದ್ ಕರೆʼ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದಶಿ ರಾಜು ಹದನೂರ, ರಾಜ್ಯ ಉಪಾಧ್ಯಕ್ಷ ಸುಂದರ ಡಿ ಸಗರ, ತಾಲೂಕ ಅಧ್ಯಕ್ಷ ಮಲ್ಲು ಕೊಡಂಬಲ್, ಜಿಲ್ಲಾ ಕಾರ್ಯದರ್ಶಿ ಶರಣಪ್ಪ ದಂಡೋತಿ, ಯುವಘಟಕ ಜಿಲ್ಲಾಧ್ಯಕ್ಷ ಸಂಜೀವ ಕೋಬಾಳಕರ, ಸಮಾಜದ ಹಿರಿಯ ಮುಖಂಡ ನಾಗೇಂದ್ರಪ್ಪ ಆರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...