ಕಲಬುರಗಿ | ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ: ಸಂದೀಪ್ ದೊಡ್ಡಮನಿ

Date:

ಬೀದರ್ ಜಿಲ್ಲೆಯ, ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದಲ್ಲಿ ಹನುಮಾನ್ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ದಲಿತರ‌ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಕಾಳಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ಕಲಬುರಗಿ ಜಿಲ್ಲೆಯ ಕಾಳಗಿ ನಗರದ ಕಂದಗೂಳ ಮುಖ್ಯ ರಸ್ತೆ ತಡೆದು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮುಖಾಂತರ ಗೃಹಸಚಿವ ಪರಮೇಶ್ವರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಪ್ರದೀಪ್ ಮಾತನಾಡಿ, “ಬೀದರ ಜಿಲ್ಲೆಯ, ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದಲ್ಲಿ ನವೆಂಬರ್‌ 3ರಂದು ಹನುಮಾನ್ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ದಲಿತರನ್ನು 192‌ ಮಂದಿ ಸವರ್ಣೀಯರು ಹಲ್ಲೆ ಮಾಡಿದ್ದರು. ಇದರಲ್ಲಿ ಈಗಾಗಲೇ 62 ಮಂದಿ ಆರೋಪಿಗಳನ್ನು ಬಂದಿಸಿದ್ದಾರೆ. ಇನ್ನುಳಿದ 132 ಮಂದಿ ಆರೋಪಿಗಳನ್ನು ಬಂದಿಸಿಲ್ಲ. ಇದನ್ನು ನೋಡಿದರೆ ಸವರ್ಣೀಯರು ದಲಿತರ ಮೇಲೆ ಇನ್ನೂ ಹಲ್ಲೆ ಮಾಡುತ್ತ ಬರುತ್ತಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

“ಸ್ವಾತಂತ್ರ್ಯ ಸಿಕ್ಕು ಸುಮಾರು ವರ್ಷಗಳಾದರೂ ಕೂಡ ನಮ್ಮ ದಲಿತರಿಗೆ ಯಾವುದೇ ರೀತಿ ರಕ್ಷಣೆ ಇಲ್ಲದಂತಾಗಿದೆ. ಸದರಿ ಉಳಿದ 132 ಮಂದಿ ಆರೋಪಿಗಳನ್ನು ಬಂಧಿಸಿ ಹಲ್ಲೆ ಮಾಡಿದ ಎಲ್ಲ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಜುಕುಮಾರ್ ಚಿಂಚೋಳಿ, ಹರೀಶ್ ವರ್ದನ್, ರೋಹಿತ್, ದೇವರಾಜ್, ಸತೀಶ್, ಗೌತಮ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...