ಕಲಬುರಗಿ | ಒಳ ಮೀಸಲಾತಿ ಸಮೀಕ್ಷೆ ನೋಂದಣಿ ಪ್ರತಿಯನ್ನು ಕುಟುಂಬಕ್ಕೆ ನೀಡುವಂತೆ ದಸಂಸ ಮನವಿ

Date:

ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು

‘ಪರಿಶಿಷ್ಟ ಜಾತಿಗಳೆಂದು ಗುರುತಿಸಿರುವ 101ಜಾತಿಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅವರವರ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟರಲ್ಲಿಯೇ ಒಳ ಮೀಸಲಾತಿ ಸಮೀಕ್ಷೆ ನಡೆಸಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ರಾಜ್ಯ ಸರ್ಕಾರದ ನಿರ್ಧಾರಕ್ಕೆ ದಸಂಸ ಸ್ವಾಗತಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ಸಮೀಕ್ಷೆಯಲ್ಲಿ ಪಾರದರ್ಶಕವಾಗಿ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳ ಕುಟುಂಬಕ್ಕೆ ಗಣತಿ ನೋಂದಣಿಯ ಒಂದು ಪ್ರತಿ ಆ‌ ಕುಟುಂಬಕ್ಕೆ ನೀಡಬೇಕು. ಯಾಕೆಂದರೆ ಕೆಲ ಗಣತಿದಾರರು ತಮ್ಮ ಮೊಬೈಲ್‌ನಲ್ಲಿ ಟೈಪ್ ಮಾಡಿಕೊಳ್ಳುವಾಗ ಆ ಕುಟುಂಬದ ಜಾತಿ – ಹೇಳಿದ್ದು ಬಿಟ್ಟು, ಇನ್ನೊಂದು ಜಾತಿಯ ಹೆಸರು ಸರ್ಪಡೆ ಮಾಡಿಕೊಳ್ಳುವ ಅನುಮಾನ ಇರುತ್ತದೆ’ ಎಂದರು.

‘ಈ ವಿಷಯವನ್ನು ಅತಿಸೂಕ್ಷ್ಮ ಎಂದು ಪರಿಗಣಿಸಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು’ ಆಗ್ರಹಿಸಿದರು.

‘ಜೇವರ್ಗಿ ಹಾಗೂ ಯಡಾಮಿ ತಾಲೂಕಿನ ಕೆಲ ಪರಿಶಿಷ್ಟ ಜಾತಿ ಕುಟುಂಬಗಳ ರೇಶನ್ ಕಾರ್ಡ್ ಮಾಡುವ ಸಂದರ್ಭದಲ್ಲಿ ಜೋಡಣೆ ಮಾಡುವಾಗ ಪರಿಶಿಷ್ಟ ಪಂಗಡ (ಎಸ್.ಟಿ) ಎಂದು ತೋರಿಸುತ್ತಿರುವದರಿಂದ ಪರಿಶಿಷ್ಟ ಜಾತಿಯ ಕುಟುಂಬಗಳು ಈ ಒಳ ಮೀಸಲಾತಿ ಸಮೀಕ್ಷೆಯಿಂದ ದೂರ ಉಳಿಯುವಂತಾಗುತ್ತದೆ. ಈ ಲೋಪ ಸರಿಪಡಿಸಬೇಕು’ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ, ಸಂಚಾಲಕರಾದ ಶಿವಕುಮಾರ ಹೆಗಡೆ, ಸಂಗಣ್ಣ ಹೊಸಮನಿ, ಮಹೇಶ ಕ್ಷತ್ರಿ, ಶ್ರೀಹರಿ ಕರಕಳ್ಳಿ, ಸಿದ್ದು ಕೆರೂರ, ಶರಣಬಸಪ್ಪ ಲಖಣಾಪೂರ, ಸಂ.ಸಂಚಾಲಕ ಜೈಭೀಮ ನರಿಬೋಳ, ರೇವಣಸಿದ್ದ ಬಿರಾಳ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...