ಕಲಬುರಗಿ | ದಯಾನಂದ ಲಾಡಂತಿ ಕೊಲೆ ಪ್ರಕರಣ : ಆರು ಮಂದಿಗೆ ಜೀವಾವಧಿ ಶಿಕ್ಷೆ

Date:

ಆಳಂದ ತಾಲ್ಲೂಕಿನ ಶುಕ್ರವಾಡಿ ನಿವಾಸಿ ದಯಾನಂದ ಲಾಡಂತಿ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿಗೆ ಕಲಬುರಗಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ ₹10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೆ ಒಳಗಾದವರು ಆಳಂದ ತಾಲ್ಲೂಕಿನ ಕಿಣ್ಣಿಸುಲ್ತಾನ್ ಗ್ರಾಮದ ಸುರೇಶ ಜಾಧವ (42), ಕಲಬುರಗಿಯ ನೀಲಕಂಠ ಮಾಮನಿ (42), ಕೃಷ್ಣ ಜಮಾದಾರ (28), ಶುಕ್ರವಾಡಿಯ ಸುನೀಲ ಲಾಡಂತಿ (35), ಕಲಬುರಗಿಯ ಅಂಬಿಕಾ ಕೊಡೆಕಲ್ (41) ಹಾಗೂ ಆಳಂದ ತಾಲ್ಲೂಕಿನ ಬಟ್ಟರಗಿ ಗ್ರಾಮದ ಸಂತೋಷ ತಳವಾರ (40) ಎಂದು ಗುರುತಿಸಲಾಗಿದೆ.

ಮೃತ ದಯಾನಂದ ಲಾಡಂತಿ ಹಾಗೂ ಸುನೀಲ ಲಾಡಂತಿ ಕುಟುಂಬಗಳ ನಡುವೆ ನಡೆದಿದ್ದ ಪಾರ್ಟಿಯೊಂದರಲ್ಲಿ ಗಲಾಟೆಯಿಂದ ಉಂಟಾದ ವೈಮನಸ್ಯವೇ ಈ ಕೊಲೆಗೆ ಕಾರಣವೆಂದು ತನಿಖೆಯಿಂದ ಬಹಿರಂಗವಾಗಿದೆ. ನಂತರ ದಯಾನಂದನ ಹತ್ಯೆಗೆ ಸುನೀಲ ಲಾಡಂತಿ 3 ಲಕ್ಷ ರೂ. ಸುಪಾರಿ ನೀಡಿದ್ದಾನೆಂದು ಪೊಲೀಸರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸಿಪಿ ಗೀತಾ ಬೇನಾಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣಕ್ಕೆ ಯತ್ನಿ: ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಪ್ರಕರಣ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮೋಹನ ಬಾಡಗಂಡಿ, ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ತಲಾ ರೂ.10 ಸಾವಿರ ದಂಡ ವಿಧಿಸುವಂತೆ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಜಿ. ಕಿರಣಗಿ ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...