ಕಲಬುರಗಿ | ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿಳಂಬ; ಶೀಘ್ರ ಬಿಡುಗಡೆಗೆ ಕಾರ್ಮಿಕರ ಆಗ್ರಹ

Date:

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಕಲಬುರಗಿ ಜಿಲ್ಲೆಯ ಶಹಾಬಾದ್‌ ತಾಲೂಕು ಸಮಿತಿ ಅಧ್ಯಕ್ಷ ರಾಮು ಜಾಧವ್ ಮಾತನಾಡಿ, “ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪೆಡರೇಷನ್ ಕರೆಯ ಮೇರೆಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ಶೈಕ್ಷಣಿಕ ಧನಸಹಾಯವನ್ನು ನೀಡುತ್ತಿದ್ದು, ಕಳೆದ ಎರಡ್ಮೂರು ವರ್ಷಗಳಿಂದ ಯಾವುದೇ ರೀತಿಯ ವಿದ್ಯಾರ್ಥಿವೇತನ ನೀಡಿರುವುದಿಲ್ಲ” ಎಂದರು.

“ಕಟ್ಟಡ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ ಧನಸಹಾಯವನ್ನು ಪಡೆಯಲು ಸೇವಾಸಿಂಧು ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದದ ಮೂಲಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾರ್ಮಿಕ ಇಲಾಖೆ ಸದರಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರು ಮಾಡಿದ್ದು, ಕಲ್ಯಾಣ ಮಂಡಳಿಯು ಬೋಗಸ್ ಕಾರ್ಮಿಕರ ಸಂಖ್ಯೆ ಹೆಚ್ಚಳ ಎನ್ನುವ ಕಾರಣದ ನೆಪವೊಡ್ಡಿ, ನೈಜ ಕಟ್ಟಡ್ಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಬಿಡುಗಡೆ ಮಾಡದೇ ವಿಳಂಬ ನೀತಿ ಅನುಸರಿಸಿ ಬಡ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕುರಿತು ರಾಜ್ಯ ಫೆಡರೇಷ್ ಸಮಿತಿಯ ನೇತೃತ್ವದಲ್ಲಿ ಹಲವು ಬಾರಿ ಹೋರಾಟ-ಪ್ರತಿಭಟನೆಗಳನ್ನು ಮಾಡಿ, ಕಾರ್ಮಿಕ ಸಚಿವರೊಂದಿಗೆ ಸಭೆ, ಮಂಡಳಿಯ ಜಂಟಿ ಕಾರ್ಯದರ್ಶಿಯವರೊಂದಿಗೆ ಮಾತುಕತೆ ನಡೆಸಿದರೂ ಕೇವಲ ಆಶ್ವಾಸನೆ ನೀಡಿದ್ದಾರೆಯೇ ಹೊರತು, ಈವರೆಗೂ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಬಹಳ ಮಂದಿ ಕಾರ್ಮಿಕರ ಖಾತೆಗೆ ಜಮಾ ಮಾಡದೆ ಬಾಕಿ ಉಳಿದಿರುತ್ತದೆ” ಎಂದರು.

“ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2021-22 ಹಾಗೂ 2022-23 ನೇ ಸಾಲಿನ ಕಲ್ಯಾಣ ಮಂಡಳಿಯಲ್ಲಿ ಬಾಕಿಯಿರುವ ವಿದ್ಯಾರ್ಥಿವೇತನ ಮೋತ್ತವನ್ನು ಶೀಘ್ರವೆ ಬಿಡುಗಡೆ ಮಾಡಿಸಿ ಕಟ್ಟಡ ಕಾರ್ಮಿಕರ ಖಾತೆಗೆ ಜಮೆ ಮಾಡಬೇಕು” ಎಂದು ಒತ್ತಾಯಿಸಿದರು.

“ಕಲ್ಯಾಣ ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಸಂಗ್ರಹವಿದ್ದರೂ ಬಡ ಕಾರ್ಮಿಕರ ಮಕ್ಕಳಿಗೆ ಕೊಡುತ್ತಿರುವ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಕಡಿತಗೊಳಿಸಲಾಗಿದೆ. ಮಾತ್ರವಲ್ಲ ಕಡಿತಗೊಳಿಸರುವ ಮೊತ್ತವನ್ನು ಕಾರ್ಮಿಕರ ಖಾತೆಗೆ ಜಮೆ ಮಾಡುತ್ತಿಲ್ಲ. ಈ ಹಿಂದೆ 2020-21ರ ಮಾರ್ಗಸೂಚಿಯಂತೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ನೀಡಬೇಕು ಹಾಗೂ 1ನೇ ತರಗತಿಂದ 10ನೇ ತರಗತಿವರೆಗೆ ಈ ಹಿಂದೆ ನೀಡುತ್ತಿದ್ದಂತೆ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದರು.

“ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ಮೂಲಕ ಮುಖ್ಯಮಂತ್ರಿ ಗಮನ ಸೆಳೆಯಲು ಕಟ್ಟಡ ಕಾರ್ಮಿಕರ ಮಕ್ಕಳಾದ ನಾವು ನಮ್ಮ ಪೋಷಕರ ಸಂಘದ ಪರವಾಗಿ ಮನವಿ ನೀಡುತ್ತಿದ್ದು, ತಾವು ಕಾರ್ಮಿಕರ ಪರವಾಗಿ ಕಲ್ಯಾಣ ಮಂಡಳಿಗೆ ಶೀಘ್ರ ಪಾವತಿಗೆ ಕ್ರಮ ವಹಿಸಲು ಆದೇಶಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಈ ಸಂದರ್ಭದಲ್ಲಿ ಪ್ರಧಾನ‌ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್, ಪ್ರಕಾಶ ‌ಕುಸಾಳೆ, ಶಿವರಾಮ್ ಚಹ್ವಾಣ್, ರವಿ ಬೆಳಮಗಿ, ಲಕ್ಷ್ಮೀಕಾಂತ, ಶಿವಶರಣಪ್ಪ, ರಾಜು, ಕಮಲಬಾಯಿ, ನಾಮದೇವ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...