ಕಲಬುರಗಿ | ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ : ಜು.9ರಂದು ಮುಷ್ಕರ

Date:

ಕನಿಷ್ಠ ವೇತನ ಜಾರಿ, ಅಂಗನವಾಡಿ ನೌಕರರ ಹುದ್ದೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9ರಂದು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದರು.

ಕಲಬುರ್ಗಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ಕಾರ್ಪೊರೇಟ್ ಬಂಡವಾಳಗಾರರ ₹18.32 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ ದೇಶದ ಭವಿಷ್ಯವನ್ನು ರೂಪಿಸುವ ಮಾನವ ಸಂಪನ್ಮೂಲದ ಬೆಳವಣಿಗೆಗೆ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಕೊಡುತ್ತಿಲ್ಲ’ ಎಂದರು.

‘ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ (ಐಸಿಡಿಎಸ್) ಕಳೆದ 50 ವರ್ಷಗಳಿಂದ ಅಂಗನವಾಡಿ ನೌಕರರು ದುಡಿಯುತ್ತಿದ್ದಾರೆ. ಸಾಮಾಜಿಕ ನ್ಯಾಯದಡಿ ಈ ಯೋಜನೆಯನ್ನು ಕಾಯಂ ಮಾಡಬೇಕು. ಗುಜರಾತ್ ಹೈಕೋರ್ಟ್ ಸಹ ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕೆಂದು ತೀರ್ಪು ನೀಡಿದೆ. ಕಾಯಂ ಮಾಡುವವರೆಗೆ ಕನಿಷ್ಠ ವೇತನ ನೀಡಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಐಸಿಡಿಎಸ್ ಯೋಜನೆಯ ಬಜೆಟ್ ಹೆಚ್ಚಿಸಬೇಕು. ಅಂಗನವಾಡಿ ನೌಕರರಿಗೆ ಮಾಸಿಕ ₹26 ಸಾವಿರ ಕನಿಷ್ಠ ವೇತನ ಹಾಗೂ ₹10 ಸಾವಿರ ಮಾಸಿಕ ಪಿಂಚಣಿ ನೀಡಬೇಕು. 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, ಹೊಸದಾಗಿ ತಂದಿರುವ ನಾಲ್ಕು ಸಂಹಿತೆಗಳನ್ನೂ ಹಿಂಪಡೆಯಬೇಕು. ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಕೊಪ್ಪಳ | ಅಂಜನಾದ್ರಿ‌ ದೇವಾಲಯ ಬಳಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ; ಪೊಲೀಸರ ಭೇಟಿ

ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಸುನಂದಾ, ಜಿಲ್ಲಾ ಅಧ್ಯಕ್ಷೆ ಗೌರಮ್ಮ ಪಾಟೀಲ, ಉಪಾಧ್ಯಕ್ಷೆ ಶ್ರೀದೇವಿ ಚುಡೆ, ಪ್ರಮುಖರಾದ ರಾಜಮತಿ, ಸುಶೀಲಾ ಹತ್ತಿ, ಜಯಶ್ರೀ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...