ಕಲಬುರಗಿ | ಮಹಿಳೆಯರ ವಿಕೃತಿ ನಡೆಸಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

Date:

ಹೆಣ್ಣುಮಕ್ಕಳ ಮೇಲಿನ ಭೀಭತ್ಸ ದೌರ್ಜನ್ಯದ ಘಟನೆಗಳು ನಡೆಯುತ್ತಿದ್ದು, ಮಹಿಳೆಯರನ್ನು ಸಂಕಷ್ಟಕ್ಕೆ ದೂಡಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಪ್ರಕರಣ ನಡೆದಿದೆ. ಕರ್ನಾಟಕದ ಅತ್ಯಂತ ಬಲಾಢ್ಯ ರಾಜಕಾರಣ ಕುಟುಂಬದ ಪ್ರಜ್ವಲ್ ರೇವಣ್ಣ ಎಂಬಾತ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ಹಿಂಸಾಕಾಂಡ ನಡೆಸಿದ್ದಾನೆ. ಇಂತಹ ವಿಕೃತಿ ಮೆರೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, “ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದಲ್ಲಿ ಮುಳುಗಿವೆ. ಹುಬ್ಬಳ್ಳಿ ನೇಹಾ ಪ್ರಕರಣದಲ್ಲಿ ಕೊಲೆಗಾರ ಅಲ್ಪಸಂಖ್ಯಾತ ಸಮುದಾಯದವನೆಂದು ತಿಳಿದಾಕ್ಷಣ ಪ್ರಕರಣವನ್ನು ಬಿಜೆಪಿ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿತು. ಅದೇ ರೀತಿ, ಪ್ರಜ್ವಲ್ ಪ್ರಕರಣವು ಹೊರಬಂದ ರೀತಿ ಭೀಕರವಾದುದು. ಸಂತ್ರಸ್ತ ಮಹಿಳೆಯರ ಗುರುತು ಸಿಗುವಂತಿದ್ದ ವಿಡಿಯೋಗಳ ಪೆನ್‌ಡ್ರೈವ್‌ಗಳು ಸಾರ್ವಜನಿಕರಿಗೆ ಸಿಕ್ಕುವಂತೆ ಮಾಡಿದ್ದು ಖಂಡನಾರ್ಹ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಸಮಾಜವನ್ನು ಎಚ್ಚರಿಸಿ, ಮಹಿಳೆಯರ ಆಯ್ಕೆಗಳನ್ನು ಮತ್ತು ಹಕ್ಕುಗಳನ್ನು ಗೌರವಿಸುವ ಅರಿವನ್ನು ಮೂಡಿಸಬೇಕಾಗಿದೆ. ಘಟನೆಗಳು ನಡೆಯುವ ಮೊದಲೇ ತಡೆಯಲು ಸಾಧ್ಯವಾಗುವಂತಹ ಸರ್ಕಾರದ ಸಂಸ್ಥೆಗಳನ್ನು ರೂಪಿಸಬೇಕು. ಇದಕ್ಕಾಗಿ ಮಹಿಳೆಯರ ಹಕ್ಕುಗಳ ವಿಷಯದಲ್ಲಿ ಸೂಕ್ಷ್ಮ ಸಂವೇದನೆಯುಳ್ಳ ಪರಿಣತರ ಹಾಗೂ ಕಾನೂನು ಮತ್ತು ವಿಷಯ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಕೂಡಲೇ ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರ ಹಕ್ಕೊತ್ತಾಯಗಳು:

• ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಲು ಎಲ್ಲ ಕ್ರಮ ತೆಗೆದುಕೊಳ್ಳಬೇಕು; ತನಿಖೆ ಹಾಗೂ ಕಾನೂನುಕ್ರಮದಲ್ಲಿ ಲೋಪವೆಸಗದೇ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
• ಸಂತ್ರಸ್ತೆಯ ಘನತೆ, ಗೌಪ್ಯತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ; ಇನ್ನಷ್ಟು ವಿಡಿಯೋ ಪ್ರಸಾರವಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತ ಮಹಿಳೆಯರ ಗುರುತು ಸಿಗುವಂತೆ ವಿಡಿಯೋ ಪ್ರಸಾರ ಮಾಡಿದವರ ಮೇಲೂ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು.
• ಪ್ರಜ್ವಲ್‌ನನ್ನು ಅಭ್ಯರ್ಥಿಯನ್ನಾಗಿಸಿ, ಆತನ ಪರ ಪ್ರಚಾರ ಮಾಡಿದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕರ್ನಾಟಕದ ಜನರ, ದೇಶದ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕು.
• ಮಹಿಳೆಯರ ಸುರಕ್ಷತೆ ಖಾತ್ರಿಯಾಗುವುದು ಸಮಾನತೆಯಿಂದ, ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವುದರಿಂದ. ಸಮಗ್ರ ಕ್ರಮಗಳಿಗೆ ಸರ್ಕಾರ ಮುಂದಾಗಬೇಕು. ತಜ್ಞರ, ಮಹಿಳಾ ಸಂಘಟನೆಗಳ ಪಾಲುದಾರಿಕೆಯೊಂದಿಗೆ ಇದು ನಡೆಯಬೇಕು.
• ಇತ್ತೀಚೆಗೆ ಕರ್ನಾಟಕದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲಾ ದೌರ್ಜನ್ಯದ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ಮತ್ತು ಶಿಕ್ಷೆಯನ್ನು ಖಾತ್ರಿಪಡಿಸಲು, ಹಾಗೆಯೇ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ನಿಯಂತ್ರಿಸುವ ಮಾರ್ಗಸೂಚಿ ಕ್ರಮಗಳಿಗಾಗಿ ಉನ್ನತ ಮಟ್ಟದ ಸಮಿತಿಯೊಂದನ್ನು ಸರ್ಕಾರ ಕೂಡಲೇ ರಚಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾರಾ ರಾವ್, ಮರೆಪ್ಪ ಹಳ್ಳಿ, ರಾಜೇಂದ್ರ ರಾಜವಾಳ್, ಲಕ್ಷ್ಮಣ ಮಂಡಲಗೇರಾ, ಭುವನ್, ವಿಕ್ರಮ್ ತೇಜಸ್, ದಿಗಂಬರ ಕಾಡಹುಲಿ, ಮೈಲಾರಿ ದೊಡ್ಡಮನಿ, ಗೌರಮ್ಮ, ರೇಣುಕಾ ಸರಡಗಿ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...