ಕಲಬುರಗಿ | ಪರಿಶಿಷ್ಟರ ಹಣ ಪರಿಶಿಷ್ಟರಿಗಾಗಿ ಮಾತ್ರ ಬಳಸುವಂತೆ ಒತ್ತಾಯ: ದಸಂಸದಿಂದ ಧರಣಿ ಸತ್ಯಾಗ್ರಹ

Date:

ಪರಿಶಿಷ್ಟರ ಹಣ, ಪರಿಶಿಷ್ಟರಿಗೆ ಮಾತ್ರ ನೀಡುವಂತೆ ಒತ್ತಾಯಿಸಿ, ಎಸ್‌ಸಿಎಸ್‌ಪಿ-ಟಿಎಸ್‌ಪಿ 2013 ಕಾಯ್ದೆಯ ಕಾಲಂ 7ಸಿ ಕೂಡಲೇ ರದ್ದುಗೊಳಿಸಬೇಕು, ಸರ್ಕಾರದ 38 ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಮನವಿ ಸಲ್ಲಿಸಿದರು.

ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ದಸಂಸ ರಾಜ್ಯ ಸಂ. ಸಂಚಾಲಕ ಸುರೇಶ ಮೆಂಗನ ಮಾತನಾಡಿ, “ಕಾಯ್ದೆ 2013ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಅವಕಾಶಗಳನ್ನು ಶಾಸನ ಬದ್ಧವಾಗಿ ಹೊಂದಲು ರಾಜ್ಯ ಸರ್ಕಾರವು ರೂಪಿಸಿದೆ. ಈ ಕಾಯ್ದೆಯ ಕಲಂ 7ಡಿ ಮತ್ತು 7ಸಿ ರಲ್ಲಿ ಕಾಯ್ದೆಯಡಿ ನಿಗದಿ ಪಡಿಸಿದ ಅನುದಾನವನ್ನ ಅನ್ಯ ಉದ್ದೇಶಗಳಿಗೆ ಬಳಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಸರ್ಕಾರಗಳು ಅವಕಾಶ ನೀಡಿರುತ್ತವೆ. ಆದ್ದರಿಂದ ಸದರಿ 7ಡಿ ಮತ್ತು 7ಸಿ ಕಾಲಂಗಳನ್ನು ರದ್ದು ಪಡಿಸುವಂತೆ ದಲಿತರ ಹಲವಾರು ಹೋರಾಟಗಳ ಫಲದಿಂದ ಕೇವಲ 7ಡಿ ರದ್ದು ಮಾಡಿ 7ಸಿ ಅನ್ನು ಉಳಿಕೊಂಡಿರುವುದು ಮತ್ತೆ 2024-25 ಹಾಗೂ 2025-26ನೇ ಸಾಲಿನಲ್ಲಿ ಕೂಡ ಗ್ಯಾರಂಟಿ ಯೋಜನೆಗಳನ್ನೊಳಗೊಂಡಂತೆ ಅನ್ಯ ಯೋಜನೆಗಳಿಗೆ ಎಸ್‌ಸಿಎಸ್‌ಪಿ- ಟಿಎಸ್‌ಪಿ ಹಣ ಉಪಯೋಗಿಸುವಂತೆ ಅವಕಾಶ ನೀಡುವ ಮೂಲಕ ಪರಿಶಿಷ್ಟರಿಗೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಅವಕಾಶವನ್ನು ಸರ್ಕಾರ ತಪ್ಪಿಸುತ್ತಿರುವುದನ್ನು ದಸಂಸ ಖಂಡಿಸುತ್ತದೆ” ಎಂದರು.

“ಕಳೆದ 11 ವರ್ಷಗಳಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಹೆಸರಲ್ಲಿ ಸುಮಾರು 4 ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ನೀಡಿದ್ದು, ಈ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸದೇ ನೇರವಾಗಿ ಪರಿಶಿಷ್ಟರ ಕುಟುಂಬಗಳಿಗೆ ಹಂಚಿಕೆ ಮಾಡಿದ್ದರೆ ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೂ ತಲಾ 20 ಲಕ್ಷಗಳು ತಲುಪ ಬೇಕಾಗಿತ್ತು. ಸರ್ಕಾರವಾಗಲೀ ವಿರೋಧ ಪಕ್ಷವಾಗಲೀ ಈ ಬಗ್ಗೆ ಗಮನ ಕೊಡದೇ ನಿರ್ಲಕ್ಷ ವಹಿಸುತ್ತಿವೆ. ಅಲ್ಲದೇ 38 ಇಲಾಖೆಗಳಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳ ಕುರಿತು ಈವರೆಗೂ ಸರಿಯಾದ ಅಂಕಿ ಅಂಶಗಳನ್ನು ನೀಡದೇ ಎಲ್ಲಾ ಇಲಾಖೆಗಳು ಪರಿಶಿಷ್ಟರ ಹಿತಾಸಕ್ತಿ ವಿರುದ್ಧ ಕೆಲಸ ಮಾಡುತ್ತಿವೆ ಹಾಗೂ ಇಂಥಹ ಇಲಾಖೆ ಮುಖ್ಯಸ್ಥರ ಮೇಲೆ ಕ್ರಮ ಜರುಗಿಸುತ್ತಿಲ್ಲದಿರುವುದು ಕೂಡ ಅಕ್ಷಮ್ಯ ಅಪರಾಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಸಲಾತಿ ಗೆದ್ದಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರುಗಳು, ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಯಾರಿಗೂ ಕಿವಿ ಬಾಯಿ ಇಲ್ಲದಂತಾಗಿದೆ” ಎಂದು ಶಾಸಕರು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Image 2025 08 07 at 7.08.54 PM

“ಕಳೆದ 2023ರ ಚುನಾವಣೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ದಲಿತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದರಿಂದ ಬಹುತೇಕ ಎಲ್ಲ ಒಳಮೀಸಲಾತಿ ಹೋರಾಟಗಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಕಾರಣ ಸರ್ಕಾರ ರಚನೆಯಾಗಿರುವುದನ್ನು ಕಾಂಗ್ರೆಸ್ ಪಕ್ಷ ಮರೆಯಬಾರದು. ಇನ್ನಾದರೂ ಎಚ್ಚೆತ್ತು ಕಲಂ 7ಸಿ ರದ್ದು ಪಡಿಸಿ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಅನುದಾನ ನೀಡುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ” ಒತ್ತಾಯಿಸಿದರು.

ಇದೆ ವೇಳೆ ದಸಂಸ ಜಿಲ್ಲಾ ಸಂಚಾಲಕ ಭೀಮಶಾ ಖನ್ನಾ ಮಾತನಾಡಿ, “ಎಸ್‌ಸಿಎಸ್‌ಪಿ-ಟಿಎಸ್‌ಪಿ 2013 ಕಾಯ್ದೆಯ ಕಾಲಂ 7ಸಿ ಕೂಡಲೇ ರದ್ದುಗೊಳಿಸಬೇಕು ಹಾಗೂ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಉಪಯೋಗಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾಯ್ದೆಯ ಕಲಂ 24ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾರಾಗೃಹಕ್ಕೆ ಕಳುಹಿಸಬೇಕೆಂದು” ಆಗ್ರಹಿಸಿದರು.

ಸರ್ಕಾರದ 38 ಇಲಾಖೆಗಳ ಬ್ಯಾಕ್ ಲಾಗ್ ಹುದ್ದೆಗಳ ಕುರಿತಂತೆ ಅಂಕಿ ಅಂಶ ನೀಡದಿರುವ ಇಲಾಖಾ ಮುಖ್ಯಸ್ಥರ ಮೇಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ Empirical ಇಂಪಿರಿಕಲ್ ಡೇಟಾ (ದತ್ತಾಂಶ) ಪಡೆದ ತಕ್ಷಣವೇ 101 ಪರಿಶಿಷ್ಟ ಜಾತಿಗಳ ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಈ ಸಂದರ್ಭದಲ್ಲಿ ಭರತ ಧನ್ನಾ, ಬಸವರಾಜ ಮಯೂರ, ವಿಜಯಕುಮಾರ್ ಟೈಗರ್, ಶಿವಪುತ್ರ ಹಾಗರಗಿ, ಶಿವಕುಮಾರ್ ಅಜಾದಪೂರ್, ಮಡಿವಾಳಪ್ಪ ಕಟ್ಟಿಮನಿ, ಭಾಗಪ್ಪ ಕಟ್ಟಿಮನಿ, ಯಲ್ಲಪ್ಪ ದೊಡ್ಡಮನಿ, ಅಭಿಷೇಕ ಉಪಾಧ್ಯಕ್ಷ, ಅರುಣಕುಮಾರ ಇನಾಂದಾರ, ಗೌತಮ ಉಪಾಧ್ಯಕ್ಷ, ರವಿ ಮಂತ್ರಿ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...