ಕಲಬುರಗಿ | ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸದಸ್ಯತ್ವ ರದ್ದುಪಡಿಸಲು ಒತ್ತಾಯ

Date:

ಶೋಷಿತ ಸಮುದಾಯದ ನಾಯಕರ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜಗತ್ತ್ ವೃತ್ತದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವುದರ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಸಿಎಂ’ಗೆ ಮನವಿ ಸಲ್ಲಿಸಿದರು.

ಬಿಜೆಪಿ ಪಕ್ಷದ ವತಿಯಿಂದ ಚಿತ್ತಾಪೂರದಲ್ಲಿ ‘ತಿರಂಗಾ ಯಾತ್ರಾ’ ಕಾರ್ಯಕ್ರಮ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ವಿಧಾನ ಪರಿಷತ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಅವಮಾನಕರ ಶಬ್ದಬಳಸಿ ಟೀಕೆ ಮಾಡಿದಾಗ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ದಿಗ್ಬಂದನ ಹಾಕಿದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಮೇ. 5 ರಂದು ಕಲಬುರಗಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಅಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರಿನ ಬಹಿರಂಗ ಸಭೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಸಚೇತಕ ಎನ್. ರವಿಕುಮಾರ ಮಾತನಾಡುತ್ತ, ಕಲಬುರಗಿಯ ಜಿಲ್ಲಾಧಿಕಾರಿಗಳು (ಪೌಜಿಯಾ ತರನ್ನುಮ್) ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐ.ಎ.ಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ. ಅವರು ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಕಾಣಿಸುತ್ತದೆ ಎಂದು ನಾಲಿಗೆ ಹರಿಬಿಟ್ಟಿದ್ದರು. ಜಿಲ್ಲೆಯಲ್ಲಿರುವ ವಿಶೇಷವಾಗಿ ದಲಿತ ಸಮುದಾಯದ ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿಗಳಾದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘನವರ್‌, ಪೊಲೀಸ್ ಇನ್ಸಪೇಕ್ಟರ್ ಚಂದ್ರಶೇಖರ ತಿಗಡಿ, ಡಿ.ಎಸ್.ಪಿ ಶಂಕರರಾವ ಪಾಟೀಲ್ ಇವರ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದಲ್ಲಿ ಸಂಘರ್ಷವನ್ನುಂಟುಮಾಡುವ ಮತ್ತು ಜಿಲ್ಲಾಧಿಕಾರಿ ಹಾಗೂ ದಲಿತ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವ ಉದ್ದೇಶದಿಂದಲೇ ಈ ಪ್ರಚೋದನೆ ಭಾಷಣ ಮಾಡಿದ್ದಾರೆ. ಅವರ ಮಾತಿನಿಂದ ಅಧಿಕಾರಿಗಳ ನೈತಿಕ ಸ್ಥೆರ್ಯ ಮತ್ತು ಕರ್ತವ್ಯಕ್ಕೆ ಕಳಂಕ ತಂದಿದೆ. ಅವರಿಗೆ ಮಾನಸಿಕ ಆಘಾತವನ್ನುಂಟು ಮಾಡಿದೆ. ಮತ್ತು ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಬಗ್ಗೆ ಮಾತನಾಡಿ ಅವಮಾನ ಮಾಡಿದ್ದಾರೆ. ಈ ಮೂಲಕ ದಲಿತರ ವಿರುದ್ಧ ದಲಿತರನ್ನು ಎತ್ತಿಕಟ್ಟಿ ಖರ್ಗೆ ಕುಟುಂಬದ ಮೇಲೆ ಗುಲಾಮಿ ಛಲುವಾದಿ ನಾರಾಯಣಸ್ವಾಮಿಯನ್ನು ಚೂ ಬಿಟ್ಟು ಕಲಬುರಗಿಯಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಕೇಸರಿಪಡೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಎನ್. ರವಿಕುಮಾರ್ ಮೇಲೆ ನಗರದ ಸ್ಟೇಷನ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಕಲಬುರಗಿಯಲ್ಲಿ ಅಶಾಂತಿ ಉಂಟುಮಾಡಿ ಪ್ರಚೋದನಕಾರಿ ಮಾತುಗಳಾಡಿದ ವಿಜಯೇಂದ್ರ, ಆರ್ ಅಶೋಕ, ಸಿ.ಟಿ. ರವಿ, ಗೋವಿಂದ ಕಾರಜೋಳ, ನಾರಾಯಣಸ್ವಾಮಿ ಇವರೆಲ್ಲ ಜಾತಿ ಧರ್ಮದ ಹೆಸರಿನಲ್ಲಿ ದ್ವೇಷ ಭಾಷಣಗಳ ಮಾಡಿದ್ದಾರೆ. ಇವರುಗಳ ವಿರುದ್ಧ ದೂರು ದಾಖಲಿಸಿ ಸುಪ್ರೀಂ ಕೋರ್ಟಿನ ಸ್ಪಷ್ಟ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಕೋಮುವಾದ ಹಾಗೂ ಸಂವಿಧಾನ ವಿರುದ್ಧ ಮಾತನಾಡಿದ ಎನ್. ರವಿಕುಮಾರ ಹಾಗೂ ಛಲವಾದಿ ನಾರಾಯಣಸ್ವಾಮಿ ಇವರ ವಿಧಾನ ಪರಿಷತ್ತಿನ ಸದಸ್ಯತ್ವವನ್ನು ರದ್ದುಪಡಿಸಲು ಒತ್ತಾಯಿಸಿದರು.

ಧರಣಿಯಲ್ಲಿ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ,ರಾಜ್ಯ ಸಂ. ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಜಿಲ್ಲಾ ಸಂಚಾಲಕ ಎಂ.ಎಂ. ಮೇತ್ರೆ, ಮಹಾಂತೇಶ ಬಡದಾಳ, ಜಯಕುಮಾರ ನೂಲಕರ್, ಮಲ್ಲಿಕಾರ್ಜುನ ಖನ್ನಾ, ಸಂತೋಷ ತೆಗನೂರ, ಸೂರ್ಯಕಾಂತ ಅಜಾದಪೂರ,ಯಾದಗಿರಿ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ ತಳಳ್ಳಿ, ಯಾದಗಿರಿ ಜಿಲ್ಲಾ ಸಂ ಸಂಚಾಲಕ ಅಜೀಜಸಾಬ್ ಐಕೂರ, ದತ್ತಾತ್ರಯ ಇಕ್ಕಳಕಿ, ಪೂಜಪ್ಪ ಮೇತ್ರೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...