ಕಲಬುರಗಿ | ಅನಧಿಕೃತ ಬೈಕ್, ಟ್ಯಾಕ್ಸಿ, ಆಟೋಗಳ ಸಂಚಾರ ತಡೆಯಲು ಆಗ್ರಹ

Date:

ಅನಧಿಕೃತ ಬೈಕ್, ಟ್ಯಾಕ್ಸಿ ಮತ್ತು ಅನಧಿಕೃತ ಆಟೋಗಳ ಸಂಚಾರ ತಡೆಯುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಆಟೋ ಚಾಲಕರ ಸಂಘ (ರಿ) ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

‘ಕಲಬುರಗಿ ನಗರದಲ್ಲಿ ಅನಧಿಕೃತವಾಗಿ ಬೈಕ್‌, ಟ್ಯಾಕಿ ಸೇವೆ ನೀಡುತಿದ್ದಾರೆ. ಈ ಹಾವಳಿಯಿಂದ ಪರವಾನಿಗೆ ಪಡೆದ ಆಟೋ ಚಾಲಕರಿಗೆ ತುಂಬಾ ತೊಂದರೆ ಆಗುತ್ತಿದೆ. ಮೊದಲೇ ಸರಕಾರದ ಶಕ್ತಿ ಯೋಜನೆಯಿಂದ ಶೇ 50ರಷ್ಟು ಆದಾಯ ಕುಸಿದಿದೆ ಎಂದು ಹೇಳಿದರು.

ʼಒಂದು ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಆಟೋಗಳಿದ್ದು, ತಾಲೂಕು ಪರವಾನಿಗೆ ಪಡೆದು ನಗರದಲ್ಲಿ ಸಂಚರಿಸುತ್ತಿರುವ ಸುಮಾರು ಎರಡು ಸಾವಿರ ವರೆಗೆ ಆಟೋಗಳಿವೆ. ಇದರಿಂದ ನಗರ ಪರವಾನಿಗೆ ಪಡೆದ ಆಟೋ ಚಾಲಕರಿಗೆ ಮನೆ ಬಾಡಿಗೆ, ಮಕ್ಕಳ ಶಾಲಾ ಶುಲ್ಕ ಮತ್ತು ಆಟೋಗಳ ಬ್ಯಾಂಕ್‌ ಸಾಲ ಪಾವತಿಸಲು ತುಂಬಾ ಸಮಸ್ಯೆಯಾಗುತ್ತಿದ್ದು, ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ’ ಎಂದು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 28 at 7.33.31 AM
ಮನವಿ ಪತ್ರ ಸಲ್ಲಿಸಿದರು.

‘ನಗರದಲ್ಲಿ ಸಂಚರಿಸುತ್ತಿರುವ ಅನಧಿಕೃತ ಬೈಕ್‌, ಟ್ಯಾಕ್ಸಿ ಮತ್ತು ಅನಧಿಕೃತ ಆಟೋಗಳ ಸಂಚಾರ ಕೂಡಲೇ ತಡೆದು ನಗರ ಪರವಾನಿಗೆ ಪಡೆದ ಆಟೋ ಚಾಲಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ : ಕಲಬುರಗಿ | ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಆಟೋ ಚಾಲಕರ ಸಂಘದ ಪ್ರಮುಖರಾದ ಲಕ್ಷ್ಮೀಕಾಂತ ಆರ್ ಮಾಲಿಪಾಟೀಲ್, ಪರಶುರಾಮ ಕೋಸಗಿ, ಎಮ್.ಡಿ.ಹುಸೇನ್, ಹಣಮಂತ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...