ಕಲಬುರಗಿ| ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಧರಣಿ

Date:

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಗವಾನ್‌ ರೆಡ್ಡಿ ಮಾತನಾಡಿ, ʼಜಿಲ್ಲೆಯಲ್ಲಿ ಸುಮಾರು 80 ವರ್ಷಗಳಿಂದ ಭೂಹೀನ ಮತ್ತು ಬಡ ರೈತರು ಕಂದಾಯ ಹಾಗೂ ಅರಣ್ಯದ ಕುರುಚಲು ಗಿಡ, ಕಲ್ಲು ಭೂಮಿ ಇರುವ ಪ್ರದೇಶಗಳಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದಾರೆ. ಇದು ಬಹುಪಾಲು ರೈತರ ಬದುಕಿಗೆ ಜೀವನಾಧಾರವಾಗಿದೆ. ಎಲ್ಲಾ ಸರ್ಕಾರಗಳು ಬಡ ರೈತರ ಜೀವನದ ವಸ್ತುಸ್ಥಿತಿ ಅರಿವಿದ್ದೇ ಸರ್ಕಾರಕ್ಕೆ ಸೇರಿದೆ ಜಮೀನಿನಲ್ಲಿ ಉಳುಮೆಗೆ ಅವಕಾಶ ಕೊಡುತ್ತಾ ಬಂದಿದೆ. ಆದರೆ ಶಾಸನಬದ್ದವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಕೂಡಲೇ ರೈತರಿಗೆ ನ್ಯಾಯ ಒದಗಿಸಿಕೊಡಬೇಕುʼ ಎಂದು ಆಗ್ರಹಿಸಿದರು.

ʼಸಹಜವಾಗಿ ಇವರಿಗೆ ಕೃಷಿ ಬೆಳೆ ಸಾಲ, ಕೃಷಿ ಪರಿಕರ ಮೇಲಿನ ಸಾಲ ಹಾಗೂ ಇನ್ನಿತರ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಅಲ್ಪಾವಧಿ ಸಾಲ ದೊರೆಯದ ಕಾರಣ ಬಹುತೇಕ ಬಡ ರೈತರು ಬೇರೆ ದಾರಿಯಿಲ್ಲದೆ ಕೈಸಾಲ ಪಡೆದು ಸಂಕಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿ ಅವರನ್ನು ಆತ್ಮಹತ್ಯೆಗೆ ದೂಡುವಂತೆ ಮಾಡುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಸರ್ಕಾರ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವುದೆಂದರೆ ದೊಡ್ಡ ಕರುಣೆ ಅಥವಾ ಭಿಕ್ಷೆಯಲ್ಲ, ಅದು ನ್ಯಾಯಬದ್ದವಾಗಿ ಕೊಡಬೇಕಾಗಿರುವ ಹಕ್ಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಜಿಲ್ಲೆಯಲ್ಲಿ ಬಾಕಿ ಇರುವ ಪ್ರಕರಣ ಇತ್ಯರ್ಥ ಮಾಡಲು ಎಲ್ಲಾ ತಾಲೂಕಗಳಲ್ಲಿ ಭೂ ಮಂಜೂರಾತಿ ಸಮಿತಿ ರಚನೆ ಮಾಡಬೇಕು. ಈಗಾಗಲೇ ಅರಣ್ಯದ ಅಂಚಿನಲ್ಲಿ ಸಾಗುವಳಿ ಮಾಡುತ್ತಿರುವ ಭೂಮಿ ಸಿ ಮತ್ತು ಡಿ ಗುಂಪಿಗೆ ಸೇರಿದೆ. ಅದನ್ನು ಕಂದಾಯ ಭೂಮಿಯನ್ನಾಗಿ ಪರಿರ್ವತಿಸಿ ಎಲ್ಲಾ ರೈತರಿಗೂ ಹಂಚಿಕೆ ಮಾಡಬೇಕು. ಅರಣ್ಯ ಭೂಮಿಯಲ್ಲಿ ಉಳಿಮೆ ಮಾಡುತ್ತಿರುವ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ನಡೆಯುತ್ತಿರುವ ದೌರ್ಜನ್ಯ ತಡೆಯಬೇಕು. ಮತ್ತು ರೈತರ ಮೇಲಿನ ಪ್ರಕರಣಗಳನ್ನು ರದ್ದು ಮಾಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ʼಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ಎಲ್ಲ ರೈತರಿಗೂ ಭೂಮಿ ಹಂಚಿಕೆ ಮಾಡಿ ಹಕ್ಕು ಪತ್ರ ನೀಡಬೇಕು.
ಎಲ್ಲಾ ಬಗರ್ ಹುಕುಂ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ಸೇರಿ ಇತರ ಸೌಲಭ್ಯ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು. ಉಳುಮೆ ಮಾಡುವ ಭೂಮಿಯನ್ನು ಅನ್ಯ ಕೆಲಸಕ್ಕಾಗಿ ಬಳಸಿಕೊಳ್ಳಲು ರೈತರನ್ನು ನಂಬಿಸಿ ಹಣ ಲೂಟಿ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಕ್ಫ್‌ ವಿರುದ್ಧ ಹೋರಾಟ : ಯತ್ನಾಳ ನೇತ್ರತ್ವದ ತಂಡಕ್ಕೆ ಬಿಜೆಪಿಗರಿಂದಲೇ ವಿರೋಧ!

ಈ ಪ್ರತಿಭಟನಾ ಧರಣಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ವಿ. ನಾಗಮ್ಮಾಳ್ ಜಿಲ್ಲಾ ಅಧ್ಯಕ್ಷ ಗಣಪತರಾವ್, ಜಿಲ್ಲಾ ಸಮಿತಿಯ ವಿಶ್ವನಾಥ್ ಸಿಂಗೆ, ಬಗರ್ ಹುಕುಂ ಸಾಗುವಳಿದಾರ ರೈತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಹೇಶ್ ಎಸ್. ಬಿ., ಹಾಗೂ ಭಾಗಣ್ಣ ಬುಕ್ಕಾ, ನೀಲಕಂಠ ಎಂ. ಹುಲಿ, ಭೀಮಾಶಂಕರ್ ಆಂದೋಲಾ, ಬಗರ್ ಹುಕುಂ ಸಾಗುವಳಿದಾರರ ಹೋರಾಟ ಸಮಿತಿಯ ಸದಸ್ಯರಾದ ಅಮೃತ್ ಚವಾಣ್, ಶಿವರಾಮ್ ರಾಠೋಡ್, ಶಿವಕುಮಾರ್ ರಾಠೋಡ್, ಬಸವರಾಜ ಪುಜಾರಿ, ಮಲ್ಲಿಕಾರ್ಜುನ ಜಾನೆ, ಶಂಭುಲಿಂಗ ಪುಜಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...