ಕಲಬುರಗಿ | ಡೀಸೆಲ್, ಟೋಲ್ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ : ಕೆ.ನೀಲಾ

Date:

ಶಾಸಕರ ಸಂಬಳ ಭತ್ಯೆಗಳನ್ನು ಯಾವ ನಾಚಿಕೆ ಇಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳ ಶಾಸಕರು ಜನಸಾಮಾನ್ಯರ ಬದುಕಿಗೆ‌ ಮಾತ್ರ ಯಾವುದೇ ರಿಯಾಯಿತಿ ನೀಡದೆ ಡೀಸೆಲ್, ಟೋಲ್ ದರ ಏರಿಕೆ ಮಾಡಿರುವುದು ಖಂಡನಾರ್ಹ ಎಂದು ಕಲಬುರಗಿ ಜಿಲ್ಲಾ ಸಿಪಿಐ(ಎಂ) ಕಾರ್ಯದರ್ಶಿ ಕೆ.ನೀಲಾ ಆಕ್ರೋಶ ವ್ಯಕ್ತಪಡಿಸಿದರು.

ʼಡೀಸೆಲ್ ದರ ಪ್ರತಿ ಲೀಟ‌ರ್‌ಗೆ ₹2 ರಷ್ಟು ಏರಿಕೆ ಮಾಡಿರುವುದು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶೇ 4 ರಿಂದ 5ರಷ್ಟು ಟೋಲ್ ದರವನ್ನು ಹೆಚ್ಚಳ ಮಾಡಿರುವುದು ಅತ್ಯಂತ ಜನವಿರೋಧಿ‌ ಕ್ರಮಗಳಾಗಿವೆ. ಈ ಎರಡು ದರ ಏರಿಕೆ ಕ್ರಮ ಕೂಡಲೇ ಕೈಬಿಡಬೇಕುʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ʼರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44ರಿಂದ ಶೇ 21.77ಕ್ಕೆ ಏರಿಕೆ ಮಾಡಿ, ಅದೇಶಿಸಿದೆ. ಬೆಂಗಳೂರಿನಲ್ಲಿ ₹89.02 ಇದ್ದ ಡೀಸೆಲ್ ಬೆಲೆ ₹91.02 ಆಗಲಿದೆ. ಉಳಿದ ಜಿಲ್ಲೆಗಳಲ್ಲಿ ಈಗಿರುವ ದರಕ್ಕೆ ಅನುಗುಣವಾಗಿ ಶೇಕಡಾ 2.73ರಷ್ಟು ಹೆಚ್ಚಳವಾಗಲಿದೆ. ನೆರೆ ರಾಜ್ಯಗಳಿಗೆ ಹೋಲಿಸಿದರೆ ಈಗ ತೆರಿಗೆ ದರ ಏರಿಕೆಯ ನಂತರ ಮಾರಾಟ ಬೆಲೆ ಹೆಚ್ಚಳವಾದರೂ, ನೆರೆಯ ರಾಜ್ಯಗಳಿಗಿಂತ ಕರ್ನಾಟಕ ದಲ್ಲಿಯೇ ಡೀಸೆಲ್ ಬೆಲೆ ಕಡಿಮ ಇರಲಿದೆ’ ಎಂದು
ಸರ್ಕಾರದ ಆರ್ಥಿಕ ಇಲಾಖೆ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿರುವುದು ಅರ್ಥಹೀನʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಗ್ಯಾರಂಟಿ ಯೋಜನೆಗೆ ಹಣ‌ನೀಡುವ ನೆಪದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಜನ ಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಗದಾ ಪ್ರಹಾರವನ್ನೇ ಹರಿಯಬಿಟ್ಟಿದೆ. ಶಾಸಕರ ಸಂಬಳ ಭತ್ಯೆಗಳನ್ನು ಯಾವ ನಾಚಿಕೆ ಇಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳ ಶಾಸಕರು ಜನಸಾಮಾನ್ಯರ ಬದುಕಿಗೆ‌ ಮಾತ್ರ ಯಾವುದೇ ರಿಯಾಯಿತಿ ನೀಡದಿರುವುದು ಖಂಡನಾರ್ಹವಾಗಿದೆ. ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ‌ ಕಹಿಗಳನ್ನು ಅನುಭವಿಸುತ್ತಿರುವಾಗಲೇ ಏಪ್ರಿಲ್‌ 1 ರಿಂದ ಅನ್ವಯವಾಗುವಂತೆ ಹಾಲು, ಡೀಸೆಲ್‌ ಮತ್ತು ಟೋಲ್ ದರ ಹೆಚ್ಚಳ ಮಾಡಿದ ಪರಿಣಾಮ ಜನರ ಬದುಕು ಮತ್ತಷ್ಟು ದುಸ್ಥರವಾಗಿದೆʼ ಎಂದು ಹೇಳಿದರು.

ʼದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್ ದರವನ್ನು ಶೇ 4ರಿಂದ ಶೇ 5ರಷ್ಟು ಹೆಚ್ಚಳ ಮಾಡಿದ್ದು, ಮಂಗಳವಾರದಿಂದಲೇ ಜಾರಿಯಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ನೀತಿಯು ಜನಸಾಮಾನ್ಯರ ಬದುಕನ್ನು ಮತ್ತಷ್ಟು ದುಸ್ಥರಗೊಳಿಸಿದ್ದು, ಮೋದಿ ಸರ್ಕಾರ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸಲು ಹೊರಟಿರುವುದು ಅನ್ಯಾಯದ ಪರಮಾವಧಿಯಾಗಿದೆ’ ಎಂದು ಸಿಪಿಐ(ಎಂ) ಸಂಘಟಕರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿಕಾಟ ಸಾಗರ ಸಿಮೆಂಟ ಕಂಪನಿಯಿಂದ ಅನ್ಯಾಯ ಬೆಸತ್ತು ಕುಟುಂಬ ಪೆಟ್ರೋಲ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

“ಜನರ ಬದುಕಿನ ಪ್ರಶ್ನೆ ಬಂದಾಗಲೆಲ್ಲ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸದಾ ಒಂದೇ ನಾಣ್ಯದ ಎರಡು ಮುಖಗಳು ಎನ್ನುವ‌ ಮಾತುಗಳು ಈ ಡೀಸೆಲ್ ಹಾಗೂ ಟೋಲ್ ದರ ಏರಿಕೆ ವಿಷಯದಲ್ಲಿ ಸಾಭೀತಾಗಿವೆ. ಒಟ್ಟಾರೆ ಎರಡೂ ಸರ್ಕಾರಗಳ ಈ ನೀತಿಗಳು ಕಾರ್ಪೊರೇಟ್ ವಲಯದವರನ್ನು ತುಷ್ಟೀಕರಣಗೊಳಿಸುವಲ್ಲಿ ಮುಂದಾಗಿವೆʼ ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...