ಕಲಬುರಗಿ | ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಜಿಲ್ಲಾಡಳಿತ ಕಾರಣ : ಗೋಪಾಲ ನಾಟೇಕಾರ

Date:

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲ್ಲೂಕಾಧ್ಯಕ್ಷ ಗೋಪಾಲ ನಾಟೇಕಾರ ಬೇಸರ ವ್ಯಕ್ತಪಡಿಸಿದ್ದಾರೆ.

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರ ಕೋಟಿ-ಕೋಟಿ ಅನುದಾನ ವೆಚ್ಚದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಜಾರಿಗೊಳಿಸಿದರೂ ಫಲಿತಾಂಶ ಅತ್ಯಂತ ಕಳಪೆ ಬಂದಿರುವುದು ಜಿಲ್ಲೆಯ ಜನತೆಗೆ ನೋವು ತರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ ಸುಧಾರಣೆಗೆ ಸರಿಯಾದ ಯೋಜನೆ ಮತ್ತು ಮೇಲ್ವಿಚಾರಣೆ ಮಾಡುವಲ್ಲಿ ಕೆಕೆಆರ್‌ಡಿಬಿ ಮತ್ತು ಜಿಲ್ಲಾಡಳಿತ ವಿಫಲವಾಗಿದೆ. ಫಲಿತಾಂಶ ಕಡಿಮೆ ಬಂದಿದ್ದನ್ನು ರಾಜಕೀಯ ನಾಯಕರು ತಲೆಕೆಡಿಸಿಕೊಳ್ಳುವುದಿಲ್ಲ. ಸ್ವಲ್ಪ ದಿನದ ನಂತರ ಎಂದಿನಂತೆ ಮರೆತುಬಿಡುತ್ತಾರೆ. ಆದರೆ ಈ ಭಾಗದ ಪ್ರತಿಭೆಯನ್ನು ನಿಧಾನವಾಗಿ ಚಿವುಟಿ ಹಾಕಲಾಗುತ್ತಿದೆ. ವೈದ್ಯಕೀಯ, ಇಂಜಿನಿಯರ್ ಸೇರಿದಂತೆ ಇತರ ಉನ್ನತ ಹುದ್ದೆಗಳಿಗೆ ಹೋಗುವ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಸಿಗದೇ ಇರುವುದು ವಂಚಿತರಾಗುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳು ಕನಿಷ್ಠ ಸಾಧನೆ ತೋರಿವೆ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಪಕ್ಷಾತೀತವಾಗಿ ತುರ್ತು ಸಭೆ ನಡೆಸಿ ಶಿಕ್ಷಣ ಪ್ರಗತಿ ಕುರಿತು ಚರ್ಚಿಸುವುದು ತುರ್ತಾಗಿ ನಡೆಸಿ, ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಗೋಪಾಲ ನಾಟೇಕರ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...