ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

Date:

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ, ಗಬ್ಬು ವಾಸನೆ ಉಂಟಾಗಿದೆ. ಇನ್ನೂ ಕೆಲವಡೆ ಚರಂಡಿಯ ಹೂಳುತೆಗೆಯದೇ ಚರಂಡಿಗಳು ಮುಚ್ಚಿವೆ. ಇದರಿಂದಾಗಿ ಕೊಳಚೆ ನೀರು ಎಲ್ಲೆಂದರಲ್ಲಿ ಸಂಗ್ರಹವಾಗುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಹರುಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ.

ಊರಿನ ಎಲ್ಲಾ ಚರಂಡಿ ನೀರುಬಂದು ವಾರ್ಡ್‌ ನಂಬರ್ ಒಂದು, ಜೈಭೀಮ್ ನಗರದ ಕುಡಿಯುವ ನೀರಿನ ಪೈಪ್ ಸುತ್ತಮುತ್ತ ಮಡುಗಟ್ಟಿ ನಿಲ್ಲುತ್ತದೆ. ಅದೇ ಪೈಪ್ ಲೈನ್‌ನಿಂದ ಕುಡಿಯುವ ನೀರು ಸರಬರಾಜಾಗುತ್ತದೆ. ಇದೇ ನೀರನ್ನು ವಾರ್ಡ್‌ನ ಜನ ಸೇವಿಸುತ್ತಾರೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ವಾಂತಿಭೇದಿ, ಕಾಲರಾದಂತ ಸಾಂಕ್ರಾಮಿಕ ರೋಗಗಳು ಹರಡಬಹುದು ಭೀತಿ ಇದೆ ಎನ್ನುತ್ತಾರೆ ಸ್ಥಳೀಯರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಮಳೆಗಾಲದಲ್ಲಿ ಮೌಲಾ ನಗರದ ಚರಂಡಿ ನೀರು ಮನೆಗಳಿಗೆ ನುಗ್ಗುತ್ತದೆ. ಇದರಿಂದ ಅಲ್ಲಿಯ ನಿವಾಸಿಗಳು ತುಂಬಾ ತೊಂದರೆ ಅನುಭವಿಸುತ್ತಾರೆ. ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯತಿಗೆ ಮನವಿ ಪತ್ರ ಸಲ್ಲಿಸಿದರು, ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸೇರ್ವೋದಯ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ್‌ ಆರೋಪಿಸುತ್ತಾರೆ.

ಈ ಕೊಳಚೆ ನೀರಿನಿಂದ ಅನೇಕ ಬಾರಿ ಹಲವು ಕುಟುಂಬಗಳಲ್ಲಿ ಅನಾರೋಗ್ಯ ಸಮಸ್ಯೆ ಎದುರಿಸಿವೆ. ಕೊಳಚೆ ನೀರು, ಸ್ವಚ್ಛತೆಯೇ ಕಾರಣ ಗ್ರಾಮ ಇದನ್ನೇಲ್ಲಾ ನೋಡದೇ ಪಂಚಾಯಿತಿ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಷ್ಟು ಬೇಗ ಸಮಸ್ಯೆ ಅರಿತು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...