ಕಲಬುರಗಿ | ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಕಲ್ಪಿಸಲು ಡಿವಿಪಿ ಆಗ್ರಹ

Date:

ಕಲಬುರಗಿ ನಗರದ ರಾಜಾಪುರ ರಸ್ತೆಯಲ್ಲಿರುವ ಸರಕಾರಿ ಬಾಲಕರ ವಸತಿ ನಿಲಯಗಳ (ಪ.ಜಾ, ಪ.ಪಂ) ಸಂಕೀರ್ಣ ಬಾಬು ಜಗಜೀವನ್ ರಾಮ್ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ ದೊಡ್ಡಮನಿ ಅವರಿಗೆ ಮನವಿ ಸಲ್ಲಿಸಿದರು.

ʼಬಾಬು ಜಗಜೀವನ್ ರಾಮ್ ವಸತಿ ನಿಲಯ ದುಸ್ಥಿತಿ ಹಾಸ್ಟೆಲ್ ಕಟ್ಟಡ ಮೇಲಿಂದ ಹಾಕಿರುವ ಡೈನೇಜ್ ಪೈಪ್‌ನ ನೀರು ಆವರಣಕ್ಕೆ ಹರಿಯುವುದು, ಕಿಟಕಿಗಳು ಒಡೆದಿವೆ. ದುರ್ನಾತದಿಂದ ನೊಣಗಳ ಕಾಟ ಹೆಚ್ಚಾಗಿ ಗಬ್ಬು ವಾಸನೆ ನಾರುತ್ತಿದೆ. ಇದರಿಂದ ವಿದ್ಯಾರ್ಥಿಗಳು ನಿತ್ಯ ಹಿಂಸೆ ಅನುಭವಿಸುವಂತಾಗಿದೆʼ ಎಂದು ದೂರಿದರು.

ʼಹಾಸ್ಟೆಲ್‌ನಲ್ಲಿ ತಯಾರಿಸುವ ಆಹಾರದಲ್ಲಿ ನಿತ್ಯವೂ ಒಂದಿಲ್ಲೊಂದು ವಸ್ತು ಪತ್ತೆಯಾಗುತ್ತದೆ. ಊಟ ಮಾಡುವ ಆಹಾರದಲ್ಲಿ ಹುಳಗಳು, ಜಿರಳೆ, ಗುಟ್ಕಾ, ಸಿಗರೇಟ್ ಸೇದಿರುವ ಕಾಗದ ಕಾಣುತ್ತವೆ. ಶೌಚಾಲಯಕ್ಕೆ ಬಳಸುವ ನೀರಿನಿಂದ ಅಡುಗೆ ತಯಾರಿಸುತ್ತಾರೆ. ಅಡುಗೆ ಕೋಣೆಯಲ್ಲಿ ತರಕಾರಿ, ದವಸ ಧಾನ್ಯಗಳು ಕೀಟ, ನೊಣಗಳ ಪಾಲಾಗುತ್ತಿವೆ. ಅಡುಗೆ ಸಿಬ್ಬಂದಿ ತಂಬಾಕು, ಗುಟ್ಕಾ, ಮದ್ಯಪಾನ ಸೇವನೆ ಮಾಡುತ್ತಲೇ ಅಡುಗೆ ತಯಾರಿಸುತ್ತಾರೆʼ ಎಂದು ವಿದ್ಯಾರ್ಥಿಗಳು ಗಂಭೀರವಾಗಿ ಆರೋಪಿಸಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಪ್ರೀತಿ ದೊಡ್ಡಮನಿ ಮಾತನಾಡಿ, ʼಈ ಬಗ್ಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು, ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ನೀಡಲು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ ಕೋಟೆಯಲ್ಲಿ ವಿಶ್ವ ಯೋಗ ದಿನಾಚರಣೆ ; ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಗಿ

ದಲಿತ ವಿದ್ಯಾರ್ಥಿ ಪರಿಷತ್ ನ ನಗರ ಘಟಕದ ಅಧ್ಯಕ್ಷ ಸಚಿನ್, ಪ್ರಮುಖರಾದ ಆನಂದ, ಪ್ರವೀಣ, ಚೇತನ್ ಕುಮಾರ್, ವಾಯ್ ಎಸ್ ಸಿಂದಗೇರಿ ಅಲ್ಲದೇ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...