ಕಲಬುರಗಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Date:

ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

ಒಬ್ಬಂಟಿಯಾಗಿದ್ದ 75 ವರ್ಷದ ವೃದ್ಧೆಯ ಮನೆಗೆ ನುಗ್ಗಿದ ವ್ಯಕ್ತಿ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯ ಬಳಿಯಿದ್ದ ಹಣ ಮತ್ತು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಈ ಕುರಿತು ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಖಂಡಿಸಿ ಪ್ರತಿಭಟನೆ :

ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಕೂಡಲೇ ಬಂಧಿಸಿ ಗಲ್ಲು ವಿಧಿಸುವಂತೆ ಆಗ್ರಹಿಸಿ ಘಟನೆ ಚಿಂಚೋಳಿ ತಾಲೂಕು ಆಡಳಿತ ಕಚೇರಿ ಎದುರು ಭೋವಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ʼವೃದ್ಧೆಯ ಮೇಲಿನ ಅತ್ಯಾಚಾರ ಮಾನವ ಕುಲ ತಲೆತಗ್ಗಿಸುವ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಆರೋಪಿಯನ್ನು ಬಿಡಬಾರದು, ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್

ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಜಗನಾಥ ಗುತ್ತೆದಾರ್‌, ಸಮಾಜದ ಜಿಲ್ಲಾಧ್ಯಕ್ಷ ಗುಂಡಪ್ಪ ಸಾಲಕುಂಕೆ, ಮುಖಂಡರಾದ ವಿಠ್ಠಲ ನೆಲೋಗಿ, ಮುಖಂಡರಾದ ಹಣಮಂತ ಗಾರಂಪಳ್ಳಿ, ಬಸವರಾಜ ವಾಡಿ, ರಾಮರೆಡ್ಡಿ ಪಾಟೀಲ್, ವಿಜಯಕುಮಾರ್ ಚೆಂಗಟಿ, ಮಾರುತಿ ಗಂಜಗಿರಿ, ಗೋಪಾಲ ಚಂದ್ರಂಪಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...