ಕಲಬುರಗಿ | ಸಾರ್ವಜನಿಕ ಶೌಚಾಲಯದ ಆಸ್ತಿ ಒತ್ತುವರಿ; ಪಿಡಿಒ ಅಮಾನತಿಗೆ ಆಗ್ರಹ

Date:

ಸಾರ್ವಜನಿಕ ಶೌಚಾಲಯದ ಆಸ್ತಿ ಒತ್ತುವರಿ ಮಾಡಿಕೊಂಡು ಸುತ್ತುಗೋಡೆಯನ್ನು ತೆರವುಗೊಳಿಸಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಕುಮ್ಮಕ್ಕು ನೀಡಿದ ಬಳೂರ್ಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆಪರೇಟರ್ ಅವರನ್ನು ಅಮಾನತು ಮಾಡಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಅಫಜಲಪುರ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‌ಪ್ರತಿಭಟನೆ ಬಳಿಕ ಕಾರ್ಯಕರ್ತರು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

“ಬಳೂರ್ಗಿ ಗ್ರಾಮದ ಸಾರ್ವಜನಿಕ ಶೌಚಾಲಯದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ಸುತ್ತು ಗೋಡೆಯನ್ನು ತೆರವುಗೊಳಿಸಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಪಿಡಿಒ ಮತ್ತು ಕಂಪ್ಯೂಟರ್‌ ಆಪರೇಟರ್‌ ಕುಮ್ಮಕ್ಕು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ವ್ಯಕ್ತಿಗಳಿಗೆ ದಂಡ ಹಾಕಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಜತೆಗೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಳೂರ್ಗಿ ಗ್ರಾಮದ ದುಧನಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಮಹಿಳೆಯರ ಸಾರ್ವಜನಿಕ ಶೌಚಾಲಯವು ಸುಮಾರು ವರ್ಷಗಳ ಹಿಂದಿನದು. ಸದರಿ ಶೌಚಾಲಯದ ಜಾಗವು ಗ್ರಾಮ ಪಂಚಾಯಿತಿ ಅಧೀನದಲ್ಲಿ ಬರುವುದರಿಂದ ಇದಕ್ಕೆ ಸುತ್ತಗೋಡೆ ನಿರ್ಮಿಸಿರುವುದಿಲ್ಲ. ಸುತ್ತಮುತ್ತಲಿನ ಜಾಗದ ವ್ಯಕ್ತಿಗಳು, ಅವರ ಅಳತೆಯ ಜಾಗವನ್ನು ಮೀರಿ ಸರ್ಕಾರದ ಹೆಚ್ಚಿನ ಜಾಗವನ್ನು ಒತ್ತುವರಿ‌ ಮಾಡಿಕೊಂಡು ಅವರಿಗೆ ಬೇಕಾದಂತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯನ್ನು ಒಡೆದುಹಾಕಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿ, ಕಟ್ಟಡ ನಿರ್ಮಿಸಿದ್ದಾರೆ” ಎಂದರು.

“ಗ್ರಾಮದ ಮಹಿಳೆಯರು ಈ ವಿಷಯವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿ ಮಹಿಳೆಯರಿಗೆ ಮನಬಂದಂತೆ ಬೈದು ಕಳುಹಿಸಿದ್ದಾರೆ. ಆದ್ದರಿಂದ ಬಳೂರ್ಗಿ ಗ್ರಾಮದ ಮಹಿಳೆಯರ ಶೌಚಾಲಯದ ಜಾಗ ಕಬಳಿಕೆ ಆಗಿರುವುದನ್ನು ನೋಡಿದಾಗ ಮಹಿಳೆಯರ ಶೌಚಾಲಯದ ಸರ್ಕಾರಿ ಜಾಗವನ್ನು ಕಬಳಿಸಿದ್ದು, ಅನ್ಯಾಯ ಎಸಗಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರಿ ಆಸ್ತಿ ಕಬಳಿಕೆ ಮಾಡಿರುವುದಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ನೀವು ಸ್ಥಳಕ್ಕೆ ಕೂಡಲೇ ಬರಬೇಕೆಂದು ಮನವಿ ಮಾಡಿದರೂ ಅವರು ಮನಬಂದಂತೆ ಮಾತನಾಡಿ, ಈ ಆಸ್ತಿಯ ವಿಷಯು ನಮಗೆ ಸಂಬಂಧಿಸಿಲ್ಲ. ನಾನು ಅಲ್ಲಿಗೆ ಬರುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದರು” ಎಂದು ಅಲವತ್ತುಕೊಂಡರು.

“ಶೌಚಾಲಯದ ಸರಕಾಗಿ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕೂಡಲೇ ಗ್ರಾಮ ಪಂಚಾಯಿತಿ ಅಧೀನದಲ್ಲಿ ಪಡೆದುಕೊಳ್ಳಬೇಕು ಹಾಗೂ ಸುತ್ತಲೂ ತಡೆಗೋಡೆ ನಿರ್ಮಿಸಬೇಕು. ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಒಡೆದುಹಾಕಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿ ಕಟ್ಟಡ ನಿರ್ಮಿಸಿರುವ ವ್ಯಕ್ತಿಗೆ ದಂಡ ವಿಧಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

“ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಇದಕ್ಕೆ
ಸಂಬಂಧಪಟ್ಟ ಮೇಲಾಧಿಕಾರಿಗಳನ್ನೂ ಅಮಾನತು ಮಾಡಬೇಕು. ಬಳೂರ್ಗಿ ಗ್ರಾಮದ ಮಹಿಳೆಯರಿಗೆ ಉಂಟಾಗಿರುವ ಅನ್ಯಾಯಕ್ಕೆ ತಾವು ನ್ಯಾಯ ಒದಗಿಸಿ, ಕೂಡಲೇ ಶೌಚಾಲಯ, ಹಾಗೂ ಸುತ್ತುಗೋಡೆ ನಿರ್ಮಿಸಿ ಚಾಲನೆ ನೀಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಮನೋಹರ ರಾಠೋಡ, ಮುತ್ತಪ್ಪ ಕುರಿಮನಿ, ಶರಣು ದಿವಾಣಜಗಿ, ನಂದಕುಮಾರ ಹರಳಯ್ಯ, ಬೈಲಪ್ಪ ಗೌರ, ದಯಾನಂದ ಪಾಟೀಲ, ಈರಣ್ಣಗೌಡ ಪಾಟೀಲ, ಶರಣಯ್ಯ ಮಠಪತಿ,
ಜಗದೀಶ ತಳವಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...