ಕಲಬುರಗಿ | ರೈತರ ಜಮೀನಿನ ಅಳತೆ, ಹದ್ದುಬಸ್ತು ಮಾಡಿಕೊಡಬೇಕು: ಸರ್ಕಾರಕ್ಕೆ ರೈತ ಸಂಘ ಆಗ್ರಹ

Date:

ಕಲಬುರಗಿ ಜಿಲ್ಲೆಯ ರೈತರ ಜಮೀನು ಅಳತೆ ಮಾಡಲು ಸರ್ಕಾರಿ ಫೀಸ್ ಕಟ್ಟಿ ಹಾಕಿದ ಅರ್ಜಿಗಳು ಸರ್ವೇ ಅಧಿಕಾರಿಗಳಿಗೆ ತಲುಪಿದ ಮೇಲೆ ನಿಮ್ಮ ಹೊಲದ ಟಿಪ್ಪಣಿ ಇಲ್ಲವೆಂಬ ನೆಪ ಹೇಳಿ ಸತಾಯಿಸುತ್ತಿದ್ದು, ಸರ್ವೇ ಅಧಿಕಾರಿಗಳು ಕುಂಟುನೆಪ ಹೇಳಿ ದಿನದೂಡಿ ರೈತರ ಜೀವದ ಜತೆಗೆ ಚಲ್ಲಾಟವಾಡುತ್ತಿದ್ದಾರೆ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಿದರು.

ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾ ಸಹಾಯಕ ಆಯುಕ್ತರು, ಪ್ರಾದೇಶಿಕ ಭೂ ದಾಖಲೆಗಳ ಇಲಾಖೆ, ಸರ್ವೆ ಇಲಾಖೆ ಸೆಟ್ಲಮೆಂಟ್ ಮತ್ತು ಭೂದಾಖಲೆಗಳ ಆಯುಕ್ತರು ಮತ್ತು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.

“ರೈತರ ಹತ್ತಿರ ಹಣ ಸುಲಿಗೆ ಮಾಡುತ್ತಿರುವುದು ಸರ್ವೇ ಸಾಮನ್ಯವಾಗಿದೆ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ಬಡ ರೈತರ ಟಿಪ್ಪಣಿ ತಯಾರಿ ಜಮೀನನ್ನು ಸರಳವಾಗಿ ಅಳತೆ ಹದ್ದಬಸ್ತು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೈತರ ಪ್ರತಿಭಟನೆ ಕಲಬುರಗಿ 1

“ಸರ್ವೇ ಅಧಿಕಾರಿಗಳು, ಹೊಲದ ಟಿಪ್ಪಣಿ ಮಾಡಿಸಲು ಸರಾಸರಿ ₹40,000ದಿಂದ ₹50,000ದವರೆಗೆ ಸುಲಿಗೆ ಮಾಡುತ್ತಿದ್ದಾರೆ. ರೈತರ ಜೀವ ಹಿಂಡುತ್ತಿರುವ ಸರ್ವೇ ಅಧಿಕಾರಿಗಳು ರೈತ ವಿರೋಧಿ ಧೋರಣೆಯಾಗಿದೆ. ಜಿಲ್ಲಾಡಳಿತ ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದೆ. ಜಿಲ್ಲೆಯಲ್ಲಿ ಸುಮಾರು ಜನ ರೈತರು ಕಣ್ಣೀರಿನಿಂದ ಕೈ ತೊಳೆಯುತ್ತಿದ್ದಾರೆ. ಬಡವರ ಮುಗ್ದ ರೈತರ ಜಮೀನು ಅಳತೆ ಮಾಡದೆ ಬೇಜವಾಬ್ದಾರಿ ತೋರಿಸುತ್ತಿರುವು ಸ್ಪಷ್ಟವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ದೇವಾಲಯ ಪ್ರವೇಶ ಸಂಘರ್ಷ; ಶಾಸಕ, ಡಿಸಿ ಸಮ್ಮುಖದಲ್ಲಿ ಶಾಂತಿಸಭೆ

“ಕೃಷಿ ಸಚಿವರು, ಸರ್ವೇ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಸಭೆ ನಡೆಸಿ ರೈತರ ಜಮೀನು ಅಳತೆ ಸಂಬಂಧ ಸೂಕ್ತವಾದ ತನಿಖೆ ನಡೆಸಿ ರೈತರ ಜಮೀನು ಟಿಪ್ಪಣಿಯನ್ನು ಸರಳತೆಯಿಂದ ತಯಾರಿಸಿ ಜಮೀನು ಅಳತೆ ಮಾಡಲು ಸರ್ಕಾರ ರೈತರ ನೆರವಿಗೆ ಬರಬೇಕು” ಎಂದು ಒತ್ತಾಯಿಸಿದರು.

“ಟಿಪ್ಪಣಿ ತಯಾರಿಸಲು ರೈತರಿಂದ ಹಣ ಸುಲಿಗೆ ಮಾಡುತ್ತಿರುವ ಸರ್ವೇ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿ ತಪ್ಪಿತಸ್ಥ ಅಧಿಕಾರಿಗಳಿಂದ ಸೇವೆಯಿಂದ ಅಮಾನತುಗೊಳಿಸಿ ರೈತರಿಗೆ ನ್ಯಾಯ ದೊರಕಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...