ಕಲಬುರಗಿ | ಅ.25ರಂದು ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಭಿನಂದನಾ ಸಮಾರಂಭ

Date:

ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಕ್ಟೋಬರ್‌ 25ರಂದು ಚಿತ್ತಾಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಚಿತ್ತಾಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಲೋಕಸಭಾ ಸದಸ್ಯರಾಗಿ ಚಿತ್ತಾಪುರ ಮತಕ್ಷೇತ್ರಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭ ನಿಮಿತ್ತ ಅಕ್ಟೋಬರ್‌ 23ರಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ” ಎಂದರು.

“ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭವನ್ನು ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಮಾಡುವ ನಿಟ್ಟಿನಲ್ಲಿ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಪುರಸಭೆ ಸದಸ್ಯರು ಮತ್ತು ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು” ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಿ: ಗುರುಪ್ರಸಾದ್ ಕೆರಗೋಡು ಆಗ್ರಹ

ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕ‌ರ್, ಪ್ರಮುಖರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಶಿವಕಾಂತ್ ಬೆಣ್ಣೂರಕ‌ರ್, ರಾಮಲಿಂಗ ಬಾನರ್‌, ನಾಗರಾಜ ಕಲ್ಲಕ್, ಭೀಮಣ್ಣ ಹೋತಿನಮಡಿ ಇದ್ದರು.

ವರದಿ : ವಾಲಿಂಟರ್ ಅನಂತ್ ದೇಶಪಾಂಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...