ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಸಾಮಾಜಿಕ ಕಾರ್ಯಕರ್ತ ಸಿದ್ಧಾರೂಢ ಅವರ ನೀಡಿರುವ ದೂರಿನ ಆಧಾರದ ಮೇಲೆ, ಭಾರತೀಯ ದಂಡಸಂಹಿತೆಯ ಸೆಕ್ಷನ್ 352 ಮತ್ತು 351(2),(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಕಂಠ ರಾಠೋಡ್ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದರೆ ಸಚಿವರಿಗೆ ಇಂದು ಬೆದರಿಕೆ ಕರೆಗಳು ಬರುತ್ತಿವೆ, ನಾಳೆ ನಿಮ್ಮ ಮನೆವರೆಗೂ ಬರಬಹುದು’ ಎಂದು ಹೇಳಿದರು. ಈ ಹೇಳಿಕೆ ಸಚಿವರ ವಿರುದ್ಧ ಜನರನ್ನು ಪ್ರಚೋದಿಸುವಂತದ್ದಾಗಿದ್ದು, ಅವರ ಪ್ರಾಣಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆ ಇದೆ ಹಾಗೂ ಕೋಮು ಗಲಭೆಗೆ ಕಾರಣವಾಗುವಂತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಸಿ ಬೃಹತ್ ಪ್ರತಿಭಟನೆ
ʼಮಣಿಕಂಠ ರಾಠೋಡ್ ಅವರ ಹೇಳಿಕೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಹೇಳಲಾಗಿದ್ದು, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಿಂದ ಶಾಶ್ವತವಾಗಿ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.





