ಕಲಬುರಗಿ | ಕ್ರಿಮಿನಾಶಕ ದೇಹಕ್ಕೆ ಸೇರಿ ಒಂದೇ ಕುಟುಂಬದ ನಾಲ್ವರು ರೈತರು ಅಸ್ವಸ್ಥ

Date:

ಬೆಳೆಗಳ ರಕ್ಷಣೆಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡುವಾಗ ರೈತನ ದೇಹಕ್ಕೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಈ ಬೆನ್ನಲ್ಲೇ, ಮತ್ತೆ ನಾಲ್ವರು ರೈತರ ದೇಹಕ್ಕೆ ಕ್ರಿಮಿನಾಶಕ ಸೇರಿ, ಆ ರೈತರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆರ್.ಬಿ ನಗರ ತಾಂಡಾದ ಒಂದೇ ಕುಟುಂಬದ ಸುನೀಲ್ ಜಾಧವ್(34), ಅನೀಲ್ ಜಾಧವ್(22), ಕುಮಾರ್(30) ಮತ್ತು ಖೇಮು ರಾಠೋಡ್(32) ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ವರು ರೈತರು ಕಳೆದ ಗುರುವಾರ ತಮ್ಮ ಜಮೀನಿನಲ್ಲಿ ಬೆಳದಿದ್ದ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಲು ಹೋಗಿದ್ದರು. ಹತ್ತಿ ಎಲೆಗಳಿಗೆ ಬರುವ ಎಲೆ ಚುಕ್ಕಿ ರೋಗ ಸೇರಿದಂತೆ ಇನ್ನಿತರ ಸಮಸ್ಯೆಗಳ ನಿವಾರಣೆಗೆ ಮೋನೋಕ್ರೋಟಾಪಸ್ ಸಿಂಪಡಣೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಮಿನಾಶಕ ಸಿಂಪಡಣೆ ಮಾಡುವಾಗ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದರೆ ಮಾರನೇ ದಿನದಿಂದ ಈ ನಾಲ್ವರಿಗೂ ಕೂಡ ವಾಂತಿ ಭೇದಿ, ತಲೆಸುತ್ತು ಆರಂಭವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿ, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈತರು ಯಾವುದೇ ಸುರಕ್ಷಿತ ಕ್ರಮ ಕೈಗೊಳ್ಳದೇ ಇರುವುದರಿಂದ ಬಾಯಿ ಮತ್ತು ಮೂಗಿನ ಮೂಲಕ ಕೀಟನಾಶಕ ದೇಹಕ್ಕೆ ಸೇರಿದೆ. ನಾಲ್ವರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

“ಕಳೆದ ವಾರದ ಹಿಂದೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸಪೇಟ್ ಗ್ರಾಮದ ಅಂಬರೀಶ್(26) ಎಂಬ ಯುವರೈತ ತನ್ನ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಮನೆಗೆ ಬಂದ ಬಳಿಕ ವಾಂತಿಭೇದಿ ಆರಂಭವಾಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ರೈತ ಅಂಬರೀಶ್ ಮೃತಪಟ್ಟಿದ್ದರು” ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್‌ ಪಟೇಲ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾವಿನಕೆರೆ ಸಂರಕ್ಷಣೆಗೆ ಆದೇಶ

“ಮದುವೆಯಾಗಿ ಒಂದು ವರ್ಷ ಮಾತ್ರವಾಗಿತ್ತು. ಆದರೆ, ಹತ್ತಿ ಬೆಳೆ ರಕ್ಷಿಸಿಕೊಳ್ಳಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದರು. ಇದೀಗ ಮತ್ತೆ ನಾಲ್ವರು ರೈತರು ಕ್ರಿಮಿನಾಶಕ ಸಿಂಪಡಣೆ ಮಾಡುವಾಗ ದೇಹಕ್ಕೆ ಸೇರಿ ಅಸ್ವಸ್ಥಗೊಂಡು ಜೀವನ್ಮರಣದೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ರೈತರು ಕ್ರಿಮಿನಾಶಕ ಸಿಂಪಡಿಸುವ ಸಂದರ್ಭದಲ್ಲಿ ತುಂಬಾ ಎಚ್ಚರಿಕೆ ವಹಿಸಬೇಕು ಮತ್ತು ಮುಂಜಾಗ್ರತಕ್ರಮವಾಗಿ ದೇಹಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕ್ರಿಮಿನಾಶಕ ದೇಹಕ್ಕೆ ಸೇರಿದರೆ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು. ವಿಳಂಬವಾದರೆ ಸಾವು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ರೈತರು ತಮ್ಮ ಬೆಳೆ ರಕ್ಷಣೆಗೆ ಹೋಗಿ ಅಪಾಯ ತಂದುಕೊಳ್ಳಬಾರದು” ಎಂದು ರೈತರಿಗೆ ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...