ಕಲಬುರಗಿ | ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಶಿಕ್ಷಕನ ಬಂಧನ

Date:

ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೊಬ್ಬನನ್ನು ಕಲಬುರಗಿಯ ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಿವರಾಜ ಹಣಮಂತ (32) ಆಳಂದ ತಾಲೂಕಿನ ಗ್ರಾಮದ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದು, 8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಗಾದಿ ಹಬ್ಬದ ಪ್ರಯುಕ್ತ ಸಂತ್ರಸ್ತೆಯ ತಾಯಿ ಮೂವರು ಮಕ್ಕಳೊಂದಿಗೆ ತವರಿಗೆ ಹೋಗಿದ್ದರು. ಪರೀಕ್ಷೆ ಕಾರಣಕ್ಕೆ ಬಾಲಕಿ ಒಬ್ಬಳೇ ಮನೆಯಲ್ಲಿ ಉಳಿದಿದ್ದಳು. ಸ್ನೇಹಿತರೊಂದಿಗೆ ಟಿವಿ ನೋಡುತ್ತಿದ್ದ ವೇಳೆ ಏಕಾಏಕಿ ಶಿವರಾಜ ಮನೆಗೆ ನುಗ್ಗಿದ್ದಾನೆ. ಗಾಬರಿಗೊಂಡ ಬಾಲಕಿಯ ಸ್ನೇಹಿತರು ಓಡಿ ಹೋಗಿದ್ದಾರೆ. ಬಳಿಕ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಪುಸಲಾಯಿಸಿ, ಹೆದರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ಪೋಷಕರು ಕಲಬುರಗಿ ನಗರದ ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಎಚ್ಚರವಾದಾಗ ನಡೆದ ಕೃತ್ಯವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಬಂಧಿತ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...