ಮೈಸೂರು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ತೆರಳಿದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶಾಸಕಿ ಕನೀಝ್ ಫಾತಿಮಾ ಆಗ್ರಹಿಸಿದ್ದಾರೆ.
ಈ ಸುದ್ದಿ ಕೇಳಿ ನನಗೆ ತೀವ್ರ ನೋವಾಗಿದೆ. ಜೀವನ ಸಾಗಿಸಲು ಪ್ರತಿ ವರ್ಷದಂತೆ ಈ ಬಾರಿಯೂ ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಆಘಾತ ಉಂಟುಮಾಡಿದೆ ಎಂದರು.
ಇದನ್ನೂ ಓದಿ: ಕಲಬುರಗಿ | ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದು, ಬಾಲಕಿಯ ಸಾವಿಗೆ ನ್ಯಾಯ ಸಿಗುವವರೆಗೆ ಕುಟುಂಬದ ಜತೆ ನಿಲ್ಲುತ್ತೇನೆ ಎಂದು ಹೇಳಿದರು.





