ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

Date:

ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹಾಜಿಮಲಂಗ ಎಂಬಾತ ಶಾಲಾ ತರಗತಿಗಳು ಮುಗಿದ ಬಳಿಕ ಟ್ಯೂಷನ್ ಕ್ಲಾಸ್‌ ಮಾಡುವುದಾಗಿ ಕೆಲವು ಮಕ್ಕಳನ್ನು ರಾತ್ರಿ ಶಾಲೆಯಲ್ಲಿ ಉಳಿಸಿಕೊಳ್ಳುತ್ತಿದ್ದು, ಕ್ಲಾಸ್ ತೆಗೆದುಕೊಂಡು ಬೆಳಗ್ಗೆ ಅವರನ್ನು ಮನೆಗೆ ಕಳುಹಿಸುತ್ತಿದ್ದರು. ಮೇ ತಿಂಗಳಲ್ಲಿ 11 ವರ್ಷದ ಬಾಲಕಿಗೆ ರಕ್ತಸ್ರಾವವಾಗಿತ್ತು. ಮಗಳು ಋತುಮತಿ(ಮುಟ್ಟು) ಆಗಿರಬಹುದೆಂದು ಪೋಷಕರು ಸುಮ್ಮನಿದ್ದು, ಎಂದಿನಂತೆ ಶಾಲೆಗೆ ಕಳುಹಿಸಿದ್ದರು. ಅಂದಿನ ರಕ್ತಸ್ರಾವ ಅತ್ಯಾಚಾರದಿಂದಾಗಿತ್ತು ಎಂಬುದು ಅವರಿಗೆ ತಡವಾಗಿ ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿಗೆ ಹೆಚ್ಚಿನ ಅಂಕದ ಆಮಿಷವೊಡ್ಡಿದ್ದ ಹಾಜಿಮಲಂಗ, ಜೀವ ಬೆದರಿಕೆ ಹಾಕಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರಿಗೂ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದನೆಂದು ತಿಳಿದುಬಂದಿದೆ. ನವೆಂಬರ್ 29ರ ರಾತ್ರಿ ಬಾಲಕಿಯನ್ನು ಸಿಬ್ಬಂದಿ ಕೋಣೆಗೆ ಕರೆದೊಯ್ದು ಮತ್ತೊಮ್ಮೆ ಕೃತ್ಯ ಎಸಗಿದ್ದಾನೆ. ಬಾಲಕಿಯು ಈ ಬಗ್ಗೆ ತನ್ನ ಪರಿಚಯಸ್ಥರಿಗೆ ತಿಳಿಸಿದ ಬಳಿಕ ಪೋಷಕರಿಗೆ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕನ ಕೃತ್ಯವನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಶಾಸಕರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದು ಕುಳಿತಿದ್ದಾರೆ. ಪ್ರತಿಭಟನೆಗೆ ಬೆಂಬಲವಾಗಿ ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳ ತರಗತಿಗಳಿಂದ ಹೊರಗೆ ಉಳಿದಿದ್ದು, ವ್ಯಾಪಾರಸ್ಥರು ತಮ್ಮ ಅಂಗಡಿ, ಮುಂಗಟ್ಟುಗಳ ಬಾಗಿಲು ಬಂದ್‌ ಮಾಡಿದ್ದಾರೆ. ಬಸ್ ಸಂಚಾರವೂ ಸ್ಥಗಿತವಾಗಿದೆ.

“ಕ್ಷೇತ್ರದ ಶಾಸಕರು ಶಿಕ್ಷಣ ಸಚಿವರೊಂದಿಗೆ ಮಾತನಾಡಿ, ಮಕ್ಕಳ ರಕ್ಷಣೆಯ ಭರವಸೆ ನೀಡಬೇಕು. ಶಾಸಕರು ಬರವವರೆಗೂ ರಸ್ತೆ ಬಿಟ್ಟು ಕದಲುವುದಿಲ್ಲ. ಸ್ಥಳಕ್ಕೆ ಬರಲು ವಿಳಂಬ ಮಾಡಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ. ಹೆಣ್ಣುಮಕ್ಕಳ ಕೈಗೆ ಕಲ್ಲುಗಳು ಬರುವ ಮೊದಲು ಅಧಿಕಾರಿಗಳು ಸ್ಥಳಕ್ಕೆ ಬರಬೇಕು” ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಪ್ರಕರಣದ ಕುರಿತು ಮಾಹಿತಿ ಪಡೆಯಲು ಈ ದಿನ.ಕಾಮ್‌ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರನ್ನು ಸಂಪರ್ಕಿಸಿದಾಗ, ಬ್ಯುಸಿ ಇರುವುದಾಗಿ ತಿಳಿಸಿದ ಅವರು ಯಾವುದೇ ಮಾಹಿತಿ ನೀಡದೆ ಕರೆ ಕಡಿತಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಸಕ ಸ್ಥಾನದಿಂದ ಯತ್ನಾಳ ವಜಾಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ, ಆಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಜಿ ಪಾಟೀಲ ಸೇರಿದಂತೆ ಬಹುತೇಕರು ಇದ್ದರು.

ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ, ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...