ಶಹಾಬಾದ್ ತಾಲೂಕಿನ ಹೊನಗುಂಟಾ ಗ್ರಾಮದ ಚಂದ್ರಲಾಂಬ ದೇವಾಲಯದಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ನಾಲ್ಕೈದು ಜನರ ತಂಡವು ದೇವಾಲಯದ ಬೀಗ ಮುರಿದು ಒಳನುಗ್ಗಿ ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳರು ದೇವಿಯ ಮೂರ್ತಿಗೆ ಅಲಂಕರಿಸಿದ್ದ 20 ಗ್ರಾಂ ತೂಕದ ಚಿನ್ನದ ತಾಳಿ ಮತ್ತು ಹುಂಡಿಯಲ್ಲಿ ಸಂಗ್ರಹವಾಗಿದ್ದ 20 ಸಾವಿರ ನಗದು ಹಣ ದೋಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಗುರುಮಠಕಲ್‌ನಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮುಂದೂಡಿಕೆ
ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿರುವ ಹಿನ್ನೆಲೆ ಶಹಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲೆ ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳ್ಳರ ಪತ್ತೆಗೆ ಪೊಲೀಸರು ತನಿಖೆ ನಡೆಸುತಿರುವುದು ತಿಳಿದು ಬಂದಿದೆ.





