ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

Date:

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರಗಳು ಜನಸಾಮಾನ್ಯರ ಜೀವನವನ್ನು ಮತ್ತಷ್ಟು ಅಧೋಗತಿಗೆ ಇಳಿಸಿವೆ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಕಾಮ್ರೇಡ್ ವಿ.ಜಿ ದೇಸಾಯಿ ಹೇಳಿದರು.

ಕಲಬುರಗಿ ನಗರದ  ಓಂ ನಗರ, ಖರ್ಗೆ ವೃತ್ತ, ಗಂಜ್ ಹಾಗೂ ಎ.ಪಿ.ಎಂ.ಸಿ ಮಾರುಕ್ಕಟ್ಟೆಯಲ್ಲಿ ನಡೆದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೋಮುವಾದಿ, ಫ್ಯಾಸೀವಾದಿ, ಬಂಡವಾಳಶಾಹಿ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಬಂಡವಾಳಶಾಹಿಗಳ ಏಜೆಂಟಗಳಾದ ಈ ಪಕ್ಷಗಳನ್ನು ತಿರಸ್ಕರಿಸಿ ಜನಹೋರಾಟದ ಮೂಲಕ ಹೊರಹೊಮ್ಮಿದ ನಮ್ಮ ಪಕ್ಷದ ಅಭ್ಯರ್ಥಿಯಾದ ಎಸ್.ಎಮ್.ಶರ್ಮಾ ರವರನ್ನು ಚುನಾಯಿಸಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಸಮಿತಿ ಸದಸ್ಯ ಕಾ.ಮಹೇಶ್ ಎಸ್.ಬಿ ಮಾತನಾಡುತ್ತಾ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರೈತರ ಸಂಕಷ್ಟಕ್ಕೆ ಪರಿಹಾರ ಸಿಗುತ್ತಿಲ್ಲ. ರೈತರ ಹೆಸರಿನಲ್ಲಿ ಪ್ರಮಾಣ ವಚನ ತೆಗೆದುಕೊಂಡು ಅವರನ್ನು ಕಡೆಗಣಿಸುತ್ತಾರೆ ಹಾಗೂ ಗೋಲಿಬಾರ್ ಕೂಡಾ ನಡೆಸುತ್ತಾರೆ. ಹಾಗಾಗಿ ಕಾರ್ಮಿಕ ವಿರೋಧಿ, ರೈತರ ವಿರೋಧಿ ಪಕ್ಷಗಳನ್ನು ‌ಸೋಲಿಸಬೇಕು ಹಾಗೂ ಈ ಸಮಸ್ಯೆಗಳಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಕಾ.ಎಸ್.ಎಂ.ಶರ್ಮಾರವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡರು.

ಈ ಸಭೆಗಳನ್ನು ಉದ್ದೇಶಿಸಿ ಕಾ.ಮಹೇಶ್ ನಾಡಗೌಡ, ಕಾ.ಸ್ನೇಹಾ ಕಟ್ಟಿಮನಿ, ಮುಂತಾದವರು ಮಾತನಾಡಿದ್ದರು.

ಅಭ್ಯರ್ಥಿಯಾದ ಎಸ್.ಎಮ್.ಶರ್ಮ ಅವರು ಮಾತನಾಡಿ, ಕಲಬುರಗಿ ಜನರ ಸಮಸ್ಯೆಗಳನ್ನು ಹಾಗೂ ಜನಹೋರಾಟದ ಧ್ವನಿಯನ್ನು ಸಂಸತ್ತಿನಲ್ಲಿ ಪ್ರತಿಧ್ವನಿಸಲು ನಮ್ಮನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಈ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಾದ ಹಣಮಂತ ಎಸ್.ಎಚ್, ಸಂತೋಷ ಹಿರವೆ, ತುಳಜಾರಾಮ, ಪ್ರೀತಿ ದೊಡ್ಡಮನಿ, ಭೀಮಾಶಂಕರ ಆಂದೋಲ, ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ನಗರದ ಜನತೆಯಿಂದ ಅಭ್ಯರ್ಥಿಗೆ ಬೆಂಬಲ ನೀಡುತ್ತಾ ವೋಟು ಕೊಡುತ್ತೇವೆ ಎನ್ನುವ ಜೊತೆಗೆ ಈಗ ನೋಟು ಕೂಡಾ ಕೊಡುತ್ತೇವೆಂದು ಧನಸಹಾಯ ಮಾಡಿದ್ದು ವಿಶೇಷವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...