ಕಲಬುರಗಿ | ಮದ್ಯ ಕುಡಿದು ಶಾಲೆಯಲ್ಲಿ ಮಲಗಿದ್ದ ಮುಖ್ಯಶಿಕ್ಷಕ ಅಮಾನತು

Date:

ಮದ್ಯ ಕುಡಿದು ಶಾಲೆಗೆ ಬಂದು ಶಾಲೆಯಲ್ಲೇ ಮಲಗಿದ್ದ ಆರೋಪ ಹಿನ್ನೆಲೆ ಕಾಳಗಿ ತಾಲ್ಲೂಕಿನ ಸಾಸರಗಾಂವ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಂಚೋಳಿ ಬಿಇಒ ವಿ.ಲಕ್ಷ್ಮಯ್ಯ ಗುರುವಾರ ಆದೇಶಿಸಿದ್ದಾರೆ.

ಶಿಕ್ಷಕ ಶಂಕರ ರಾಠೋಡ್‌ ಅವರು ಬುಧವಾರ (ಮಾ.5) ರಂದು ಮಧ್ಯಾಹ್ನ ಮದ್ಯ ಸೇವಿಸಿ ಶಾಲೆಗೆ ಬಂದಿದ್ದರು. ಶಾಲಾ ಕಚೇರಿಯಲ್ಲೇ ಮಲಗಿದ್ದನ್ನು ಪ್ರಶ್ನಿಸಿದ ಪೋಷಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ನಿತ್ಯ ಶಾಲಾ ಸಮಯ ಪಾಲಿಸುವುದಿಲ್ಲ. ಅಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ವಿತರಿಸಿರುವುದಿಲ್ಲ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ವರದಿ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಕಲಬುರಗಿಯ ಹೆಚ್ಚುವರಿ ಆಯುಕ್ತರು ಗುರುವಾರ (ಮಾ.6) ರಂದು ದೂರವಾಣಿ ಮೂಲಕ ಆದೇಶಿಸಿದಂತೆ, ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ (ನಡತೆ)ಗಳ ಉಲ್ಲಂಘನೆ, ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಬಿಇಒ ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ನಕಲಿ ವಿದ್ಯಾರ್ಥಿನಿ ಪೊಲೀಸ್ ವಶಕ್ಕೆ

ಬಿಇಒ ವಿ.ಲಕ್ಷ್ಮಯ್ಯ, ಅಕ್ಷರದಾಸೋಹ ಯೋಜನೆ ಸಹಾಯಕ ನಿರ್ದೇಶಕ ಜಯಪ್ಪ ಚಾಪಲ್, ಸಿಆರ್‌ಪಿ ಶಿವಶರಣಪ್ಪ ಹೊಸಳ್ಳಿ ಗುರುವಾರ ಮಧ್ಯಾಹ್ನ ಶಾಲೆಗೆ ಭೇಟಿ ನೀಡಿ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರಿಗೆ ಅಮಾನತು ಆದೇಶ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...