ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

Date:

ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಹಿತ ಒಟ್ಟು ಆರು ಜನರು ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ.

ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳಾದ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಾಗೂ ವಕೀಲರಾಗಿರುವ ಹಣಮಂತ ಯಳಸಂಗಿ, ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ್ ಭಂಡಾರಿ, ಶ್ರೀಕಾಂತ್ ರೆಡ್ಡಿ, ಉದಯ್ ಕುಮಾರ್ ಖಣಗೆ, ಅರವಿಂದ ಕುಮಾರ್ ಕಮಲಾಪುರ ಹಾಗೂ ಸಂತೋಷ ಪಾಳ ಅವರು ನಗರ ಪೋಲಿಸ್ ಆಯುಕ್ತರ ಕಚೇರಿಯಲ್ಲಿ ಸ್ವಯಂ ಪ್ರೇರಿತರಾಗಿ ಪೊಲೀಸರಿಗೆ ಶರಣಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಬಂಧಿಸಲಾಯಿತು.

ಸರಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಗುರಿಯಾಗಿರಿಸಿ ಹನಿಟ್ರ್ಯಾಪ್ ಮಾಡಲು ಯುವತಿಯರನ್ನು ಮುಂದೆ ಬಿಟ್ಟು ಲಾಡ್ಜ್‌ಗೆ ಕರೆಸುತ್ತಿದ್ದು, ನಂತರ ತಾವೇ ದಾಳಿ ನಡೆಸಿ, ಪೋಟೋ-ವಿಡಿಯೋ ಚಿತ್ರೀಕರಿಸಿ ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪ ಇವರ ಮೇಲಿದ್ದು, ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ ಹಾಗೂ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ 47 ಲಕ್ಷ ವಸೂಲಿ ಮಾಡಿದ್ದು, ಅಮಾಯಕ ಯುವತಿಯರನ್ನೂ ಹಣ ನೀಡದೇ ವಿಡಿಯೋ ಇಟ್ಟುಕೊಂಡು ವಂಚಿಸಿದ್ದಾರೆ ಎಂದು ನೊಂದ ಯುವತಿಯರು ಭೀಮ್ ಆರ್ಮಿ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ಮಾಡಿದ್ದರು.

ಪೊಲೀಸರಿಗೆ ಶರಣಾದ ವೇಳೆ ಹೇಳಿಕೆ ನೀಡಿರುವ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, “ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣದಿಂದ ಸ್ವಯಂ ಪ್ರೇರಿತನಾಗಿ ಶರಣಾಗಿದ್ದೇನೆ. ನನ್ನ ವಿರುದ್ಧ ಪಿತೂರಿ ಮಾಡಿದವರ ಹೊಟ್ಟೆ ತಣ್ಣಗಾಗಿರಬಹುದು. ಇದು ಕೇವಲ ತಾತ್ಕಾಲಿಕ. ನಾನು ಅನ್ಯಾಯದ ವಿರುದ್ಧ ಹೋರಾಟವನ್ನು ಮುಂದುವರೆಸುತ್ತೇನೆ. ದೋಷಮುಕ್ತರಾಗಿ ನಾವು ಹೊರಬರುತ್ತೇವೆ ಎಂಬ ವಿಶ್ವಾಸ ನಮಗಿದೆ” ಎಂದು ತಿಳಿಸಿದರು.

ಆರೋಪಿಗಳು ಪೊಲೀಸರಿಗೆ ಶರಣಾದ ಸಂದರ್ಭದಲ್ಲಿ ನೂರಾರು ಮಂದಿ ದಲಿತ ಸೇನೆಯ ಕಾರ್ಯಕರ್ತರು ಪೊಲೀಸ್ ಕಮಿಷನರ್ ಆವರಣದಲ್ಲಿ ನೆರೆದಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಇಬ್ಬರು ಯುವತಿಯರು ಮತ್ತು ಕಲಬುರಗಿ ಜಿಲ್ಲೆಯ ಓರ್ವ ವಿವಾಹಿತ ಮಹಿಳೆ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಸೈಬರ್ ಕ್ರೈಂಗೆ ವರ್ಗಾವಣೆ ಮಾಡಲಾಗಿತ್ತು. ದಲಿತ ಸೇನೆಯ ಕಮಲಾಪುರ ಸಂಘಟನೆಯ ತಾಲೂಕು ಅಧ್ಯಕ್ಷ ರಾಜು ಲೆಂಗಟಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...