ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಾಸ್ಟೆಲ್ ಗುತ್ತಿಗೆ ನೌಕರರ ಧರಣಿ

Date:

ಸರಕಾರದ ಆದೇಶದಂತೆ ಕನಿಷ್ಟ ವೇತನ ಪಾವತಿಸಲು ಮತ್ತು ಬೀದರ ಮಾದರಿಯಂತೆ ಸೊಸೈಟಿ ಪ್ರಾರಂಭಿಸುವುದು ಹಾಗೂ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಸೋಮವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡುವುದರ ಮೂಲಕ ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ರಾಜ್ಯ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮಾತನಾಡಿ, ʼಕಲಬುರಗಿ ಜಿಲ್ಲೆಯಲ್ಲಿರುವ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು 2025 ಫೆಬ್ರುವರಿ ತಿಂಗಳಲ್ಲಿ 27 ದಿನಗಳ ಕಾಲ ನಿರಂತರ ಹೋರಾಟ ನಡೆಸಿದಾಗ ಸರಕಾರ ಕನಿಷ್ಟ ವೇತನ 25,714 ರೂಪಾಯಿ ಕೊಡುವುದಾಗಿ ಘೋಷಿಸಿತು. ಅಲ್ಲದೆ ಪವಾರ್ ಏಜೆನ್ಸಿಗಳ ಶೋಷಣೆ ತಪ್ಪಿಸಲು ಇಡೀ ರಾಜ್ಯದಲ್ಲಿ ಬೀದರ ಮಾದರಿಯಲ್ಲಿ ಸೊಸೈಯಿಟಿ ಪ್ರಾರಂಭಿಸಲಾಗುವುದೆಂದು ಸರಕಾರ ಒಪ್ಪಿಕೊಡಿತು. ಆದರೆ, ಐದು ತಿಂಗಳು ಕಳೆದರೂ ಯಾವುದೇ ಪ್ರಕ್ರಿಯೆ ಮಾಡದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಕೂಡಲೇ ಒಪ್ಪಿಕೊಂಡ ಬೇಡಿಕೆ ಈಡೇರಿಸಬೇಕುʼ ಎಂದು ಒತ್ತಾಯಿಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜ ಕಲ್ಯಾಣ ಇಲಾಖೆ ಬಿಸಿಎಂ ಇಲಾಖೆ ನೌರರಿಗೆ ಜುಲೈ ತಿಂಗಳವರೆಗೆ ವೇತನ ಪಾವತಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನೌಕರರಿಗೆ 2-3 ತಿಂಗಳ ವೇತನ ಪಾವತಿಯಾಗಿಲ್ಲ. ಅಲ್ಲದೆ ಈ ಶಾರ್ಪ್ ಏಜೆನ್ಸಿಯು ಇಪಿಎಫ್ ಮತ್ತು ಇಎಸ್ಐ ಪ್ರತಿ ತಿಂಗಳು ನೌಕರರ ಹೆಸರಿಗೆ ತುಂಬದೆ ಮೋಸ ಮಾಡಲಾಗುತ್ತಿದೆ. ಇದೇ ಮೈಸೂರಿನ ಶಾರ್ಪ್ ಏಜೆನ್ಸಿಯು ಸಮಾಜ ಕಲ್ಯಾಣ ಇಲಾಖೆ ನೌಕರರರಿಗೆ ಈ ಹಿಂದೆ 2025 ಜನವರಿವರೆಗೆ ನಾಲ್ಕು ವರ್ಷಗಳ ವೇತನ ಪಾವತಿಸಿದ್ದು 3-4 ತಿಂಗಳ ಬಾಕಿ ವೇತನ ಪಾವತಿಸಿರುವುದಿಲ್ಲ. ನೌಕರರು ಬಾಕಿ ವೇತನ ಕೇಳಿದರೆ ಇಲ್ಲವೆಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಾರ್ಪ್ ಏಜೆನ್ಸಿಯು ಮೋರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ವಸತಿ ನಿಲಯಗಳ ನೌಕರರಿಗೆ ಅನುದಾನವಿದ್ದರೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುತ್ತಿಲ್ಲ. ಇಪಿಎಫ್, ಇಎಸ್ಐ ಸರಿಯಾಗಿ ಸವಲತ್ತುಗಳನ್ನು ಕೊಡದೆ ಅನ್ಯಾಯ ಮಾಡುತ್ತಿದ್ದಾರೆʼ ಎಂದು ಆರೋಪಿಸಿದರು.

ʼಈ ಹಿಂದೆ ನೇರ ನೇಮಕಾತಿಯಿಂದ ಜಿಲ್ಲೆಯಲ್ಲಿ ಕೆಲಸ ಕಳೆದುಕೊಂಡ 75 ಜನ ನೌಕರರು ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಆದರೆ ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆದಿ ಹೊಸಬರನ್ನು ನೇಮಕ ಮಾಡಿಕೊಳ್ಳುವುದನ್ನು ತಡೆಗಟ್ಟಬೇಕುʼ ಎಂದು ಮನವಿ ಸಲ್ಲಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡಿ, ಜೇವರ್ಗಿ ತಾಲೂಕು ಅಧ್ಯಕ್ಷ ಕಲ್ಯಾಣಿ ಪೂಜಾರಿ, ಅಫಜಲಪೂರ ಅಧ್ಯಕ್ಷ ಬಾಬು ಹೊಸಮನಿ, ಆಳಂದ ತಾಲೂಕು ಅಧ್ಯಕ್ಷೆ ನಾಗರತ್ನ ಮದನಕರ, ಸಂದಿಪ್ಪ ಯಗನೂರ, ಜಿಲ್ಲಾ ಉಪಾಧ್ಯಕ್ಷೆ ಮೆಘರಾಜ ಕಠಾರೆ, ಚಿತ್ತಾಪೂರ ತಾಲೂಕು ಅಧ್ಯಕ್ಷ ರವಿಚಂದ್ರ ಯರಗೋಳಿ, ಸುನಿಲ ಹಾಗರಗಿ, ಸೇಡಂ ತಾಲೂಕು ಅಧ್ಯಕ್ಷೆ ನರಸಮ್ಮ ಕೊರಿಡಂಪಳ್ಳಿ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...