ಕಲಬುರಗಿ | ತನ್ನದಲ್ಲದ ತಪ್ಪಿಗೆ ಹಾಸ್ಟೆಲ್ ವಾರ್ಡನ್ ಅಮಾನತು; ಆದೇಶ ಹಿಂಪಡೆಯಲು ವಿದ್ಯಾರ್ಥಿನಿಯರ ಧರಣಿ

Date:

ಹಾಸ್ಟೆಲ್ ವಾರ್ಡನ್ ಅಮಾನತು ಮಾಡಿರುವುದನ್ನು ಖಂಡಿಸಿ ಹಾಗೂ ಹಾಸ್ಟೆಲ್‌ನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಧರಣಿ ನಡೆಸಿದರು.

ಕಲಬುರಗಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಎರಡು ದಿನಗಳಿಂದ ಹಾಸ್ಟೆಲ್ ಗೇಟ್ ಮುಚ್ಚಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ.

ವಸತಿ ನಿಲಯದಲ್ಲಿ ಎರಡು ದಿನಗಳಿಂದ ಬಳಸಲು ನೀರು ಇಲ್ಲದೇ ಇರುವುದರಿಂದ ಹಾಗೂ ವಸತಿ ನಿಲಯದ ಶೌಚಾಲಯಗಳು ಸ್ನಾನ ಕೋಣೆ ಬ್ಲಾಕ್ ಆಗಿದ್ದು ಅದನ್ನು ಕೂಡಲೇ ಶುಚಿಗೊಳಿಸಬೇಕು, ಸಮರ್ಪಕ ನೀರು ಪೂರೈಸಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್ ವಸತಿ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆ ಕುರಿತು ವಿಚಾರಿಸಿದಾಗ, “ಊಟದ ಕುರಿತು ವಾರ್ಡನ್ ಅಮಾನತ್ತಿಗಾಗಿ ನಾವು ಪ್ರತಿಭಟನೆ ಮಾಡಿಲ್ಲ. ಎರಡು ದಿನಗಳಿಂದ ನೀರಿನ ಸಮಸ್ಯೆ, ಬಾತ್‌ರೂಮ್ ಗಳು ಬ್ಲಾಕ್ ಆಗಿದ್ದು ಅವುಗಳನ್ನು ಸ್ವಚ್ಛಗೊಳ್ಳಿಸಬೇಕು ಎಂದು ಪ್ರತಿಭಟನೆ ಮಾಡಿದ್ದೇವೆ. ವಾರ್ಡನ್ ಗುರುಲಿಂಗಮ್ಮ ಅವರು ಟ್ಯಾಂಕರ್‌ ನೀರು ತರಿಸಿ ಹಾಕಿದ್ದಾರೆ. ಅವರನ್ನು ಅಮಾನತು ಮಾಡಿರುವುದು ತಪ್ಪು” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ನ ಬೋರ್‌ವೆಲ್ ಕೆಟ್ಟಿದ್ದು, ಅದನ್ನ ದುರಸ್ತಿ ಮಾಡಲು ಹತ್ತು ಸಾವಿರ ಒಳಗೆ ಯಾವುದೇ ಖರ್ಚು ಬಂದರೂ ನಾನೇ ದುರಸ್ತಿ ಮಾಡಿಸುವೆ. ಅದಕ್ಕಿಂತ ಮೇಲ್ಪಟ್ಟು ಖರ್ಚು ಬಂದರೆ ಮೇಲಧಿಕಾರಿಗಳು ಅನುಮತಿ ನೀಡಿ, ಅವರ ಒಪ್ಪಿಗೆ ಮೇರೆಗೆ ಮಾಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗಾಗಿ ವಾರ್ಡನ್ ಅವರ ತಪ್ಪೇನಿಲ್ಲ. ಅವರು ವಿದ್ಯಾರ್ಥಿನಿಯರನ್ನು ತುಂಬಾ ಚೆನ್ನಾಗಿ ನೋಡಿಕ್ಕೊಳ್ಳುತ್ತಿದ್ದಾರೆ. ಆದರೆ ವಾಸ್ತವ ಸತ್ಯ ಅರಿಯದೆ, ಗುರುಲಿಂಗಮ್ಮ ಅವರ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟ ಮಾಡಲಾಗಿದೆ. ವಾಸ್ತವಾಂಶವನ್ನು ಅರಿಯದೇ ಅಧಿಕಾರಿಗಳು ವಾರ್ಡನ್ ಅವರನ್ನು ಅಮಾನತು ಮಾಡಿದ್ದಾರೆ. ಇದು ತಪ್ಪು. ಆದೇಶ ವಾಪಸ್ ಪಡೆಯಬೇಕು” ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ.

ಗುರುಲಿಂಗಮ್ಮ ಅವರ ಅಮಾನತು ಮಾಡಬಾರದು. ಅವರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿರುವ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ಪತ್ರದ ಮೂಲಕ ವಿಚಾರ ತಿಳಿಸಿದ್ದೇವೆ. ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆಯೂ ಅಧಿಕಾರಿಗಳಿಗೆ ಮನವಿಯಲ್ಲಿ ತಿಳಿಸಿದ್ದೇವೆ ಎಂದು ವಸತಿ ನಿಲಯದ ವಿದ್ಯಾರ್ಥಿನಿಯರು ಮಾಹಿತಿ ನೀಡಿದರು.

ವರದಿ: ಗೀತಾ ಹೊಸಮನಿ, ಕಲಬುರಗಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...