ಕಲಬುರಗಿ | ಬಿಸಿಲಿನ ತಾಪ : ಮನರೇಗಾ ಕಾರ್ಮಿಕರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ

Date:

ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ಮನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿಶೇ 30% ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ʼಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು. ಚಹಾ, ಕಾಫಿ, ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು. ನೀರನ್ನು ಯಥೇಚ್ಛವಾಗಿ ಕುಡಿಯಬೇಕುʼ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...