ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

Date:

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 9 ಲೀಟರ್ ಮದ್ಯ ಹಾಗೂ 45 ಲಕ್ಷ ರೂ. ಮೌಲ್ಯದ ವೋಲ್ವೋ ಬಸ್‌ಅನ್ನು ಕಲಬುರಗಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಖಾಸಗಿ ಬಸ್ ಗೋವಾದಿಂದ ಹೈದರಾಬಾದ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಅಬಕಾರಿ ಅಧಿಕಾರಿಗಳು ಕಲಬುರಗಿಯ ಹೊರವಲಯದಲ್ಲಿ ಬಸ್‌ ತಡೆದು ಪರಿಶೀಲನೆ ನಡೆಸಿದ್ದಾರೆ. ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮುರಳೀಕೃಷ್ಣ ಸತ್ಯನಾರಾಯಣ, ಬಾನೋತ್ ದೇವುಜಾ ಮತ್ತು ವೆಂಕಟೇಶ್ ಲಾಜರ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

“ಹೈದರಾಬಾದ್ ಮತ್ತು ಗೋವಾ ನಡುವೆ ಈ ಬಸ್ ನಿಯಮಿತವಾಗಿ ಚಲಿಸುತ್ತದೆ. ಎಲ್ಲ ಮದ್ಯದ ಬಾಟಲಿಗಳನ್ನು ಟೂಲ್ ಬಾಕ್ಸ್‌ನಲ್ಲಿ ಇಡಲಾಗಿತ್ತು. ಈ ಬಸ್ಸಿನಲ್ಲಿ ಗೋವಾದಿಂದ ಅಕ್ರಮ ಮದ್ಯ ಸಾಗಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು, ಆದರೆ ಕಲಬುರಗಿಯಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಇದ್ದ ಕಾರಣ ಮೂರು ದಿನಗಳಿಂದ ಕ್ರಮಕೈಗೊಳ್ಳಲಾಗಿರಲಿಲ್ಲ. ಈಗ ಬಸ್‌ ಅನ್ನು ವಶಕ್ಕೆ ಪಡೆದಿದ್ದೇವೆ” ಎಂದು ಕಲಬುರಗಿ ಉಪ ವಿಭಾಗದ ಅಬಕಾರಿ ನಿರೀಕ್ಷಕ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...