ಕಲಬುರಗಿ ‌| ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಭೆ

Date:

ಕಲಬುರಗಿ ಜಿಲ್ಲಾ‌ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನೀಡಿದರು.

ʼಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಗಳಿದ್ದು, ಅಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸಬೇಕು. ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳ ಕುರಿತು ನಗರ ಪೊಲೀಸ್ ಆಯುಕ್ತರು ಹಾಗು ಜಿಲ್ಲಾ ಎಸ್ ಪಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಬೇಕೆಂದುʼ ಎಂದು ತಿಳಿಸಿದರು.

“ಗ್ರಾಮೀಣ ಭಾಗದ ಬಹುತೇಕ ಜನರು ಒಮ್ಮೆಯೂ ಪೊಲೀಸ್ ಠಾಣೆಗೆ ಬಂದಿರುವುದಿಲ್ಲ. ಸಮಸ್ಯೆ ಹೇಳಿಕೊಂಡು ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪೋಕ್ಸೋದಂತಹ ಗಂಭೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿವಿಲ್ ಸ್ವರೂಪದ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯವರ್ತಿಗಳಂತೆ ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಅಂತಹ ಅಧಿಕಾರಿಗಳು ತಮ್ಮ ನಡೆಯನ್ನು ಸರಿಪಡಿಸಿಕೊಳ್ಳಬೇಕು. ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದರು.

“ಇತ್ತೀಚಿಗೆ ನಗರದಲ್ಲಿ ನಡೆದ ಚಿನ್ನಾಭರಣ ಅಂಗಡಿಯ ದರೋಡೆ ಹಾಗೂ ಅಕ್ರಮ ನೇಮಕಾತಿ ಪ್ರಕರಣವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಇದರಿಂದ ಜಿಲ್ಲೆಗೆ ಕೀರ್ತಿ ಹೆಚ್ಚಲಿದೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ : ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜಗದೀಶ್ ಗುತ್ತೇದಾರ, ಚಿಂಚೋಳಿ ಶಾಸಕ ಅವಿನಾಶ್ ಜಾದವ್, ಪೊಲೀಸ್ ವರಿಷ್ಠಾಧಿಕಾರಿ ಆಡ್ಡೂರು ಶ್ರೀನಿವಾಸಲು,‌ ಪೊಲೀಸ್ ಆಯುಕ್ತರು ಶರಣಪ್ಪ ಎಸ್. ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...