ಕಲಬುರಗಿ | ಸರ್ಕಾರಿ ಅನುದಾನ ದುರ್ಬಳಕೆ; ಸಹಾಯಕ ಇಂಜಿನಿಯರ್‌ಗಳ ಅಮಾನತಿಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

Date:

ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಪಂಚಾಯತ್ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಇಂಜಿನಿಯರ್ ಬಾಲಕೃಷ್ಣ ಹಾಗೂ ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.

ಕಲಬುರಗಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸುವುದರ ಮೂಲಕ ಇಂಜಿನಿಯರಿಂಗ್ ಅಧೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.

ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರು ಮತ್ತು ಅಫ್ಜಲಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಾಲಕೃಷ್ಣ ಅವರು ಮತ್ತು ಸಂಬಂಧಪಟ್ಟ ಕಿರಿಯ ಅಭಿಯಂತರರು ಸೇರಿಕೊಂಡು ತಮ್ಮ ಕರ್ತವ್ಯ ಮರೆತು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. 2022-23ನೇ ಸಾಲಿನಲ್ಲಿ 61 ಕಾಮಗಾರಿಗಳು ಮಾಡದೆ ಸರ್ಕಾರದ ರೂ.2,09,70,000-00(ಎರಡು ಕೋಟಿ ಒಂಬತ್ತು ಲಕ್ಷದ ಎಪ್ಪತ್ತು ಸಾವಿರ ) ರೂಪಾಯಿಗಳ ಮೊತ್ತದ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರ್ಬಳಕೆ ಮಾಡಿಕೊಂಡಿರುವ ಭ್ರಷ್ಟ ಅಧಿಕಾರಿಗಳಾದ ಮೋನಪ್ಪಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನುನಿನ ಸುಕ್ತವಾದ ಕ್ರಮ ಮಾಡಬೆಕೆಂದು ಒತ್ತಾಯಿಸಿ, ಮನವಿ ಪತ್ರ ಸಲ್ಲಿಸಿದರು.

WhatsApp Image 2024 10 17 at 6.48.52 PM

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಕೊರಳ್ಳಿ ಜಿಲ್ಲಾ ಉಪಾಧ್ಯಕ್ಷರಾದ, ವರದ ಸ್ವಾಮಿ ಹಿರೇಮಠ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಅರುಣ್ ಕುಮಾರ್ ನಾಮದರ, ಆಸಿಫ್ ರುದ್ರವಾಡಿ, ಜಿಲ್ಲಾ ಪದಾಧಿಕಾರಿ ಸಂದೀಪ ಭೀಮಳ್ಳಿ, ರಾಹುಲ ಸರ್, ನಾಗರಾಜ ಕೋಗನೂರ, ಅಫ್ಜಲಪುರ ತಾಲೂಕು ಅಧ್ಯಕ್ಷರಾದ ಸದಾನಂದ ಕ್ಷತ್ರಿ, ಜೇವರ್ಗಿ ತಾಲೂಕು ಅಧ್ಯಕ್ಷರಾದ ಸತೀಶ ಜಾಗಿರದಾರ, ವಿಕ್ರಮ ಚಿಂಚೋಳಿ ತಾಲೂಕು ಅಧ್ಯಕ್ಷರಾದ ರಮೇಶ, ಯಡ್ರಾಮೀ ತಾಲೂಕು ಅಧ್ಯಕ್ಷರಾದ ಜಗದೀಶ ಅಫ್ಜಲಪುರ, ತಾಲೂಕು ಉಪಾಧ್ಯಕ್ಷರಾದ ಮುತ್ತು ಕುರಿಮನಿ, ಶರಣು ದೇವನಾಜಿ, ಸಚಿನ, ಆಕಾಶ ಕೊತಲಿ, ಲಿಂಗರಾಜ ಸ್ವಾಮಿ ನೀಲಕಂಠ ಸೇರಿಕಾರ ಹಾಗೂ ಅನೇಕ ಜಯ ಕರ್ನಾಟಕ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...