ಕಲಬುರಗಿ | ಪತ್ರಕರ್ತ ವಿಜಯಕುಮಾರ ಜಿಡಗಿಗೆ ಕಾಯಕ ರತ್ನ ಪ್ರಶಸ್ತಿ: ಬಸವರಾಜ ತೋಟದ್

Date:

ಕಲಬುರಗಿ ನಗರದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀದೇವಿ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಛಾಯಾಚಿತ್ರ ಕಲಾ ಸಂಸ್ಥೆಯಿಂದ ಕೊಡಮಾಡುವ ಪ್ರತಿಷ್ಠಿತ ಕಾಯಕ ರತ್ನ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ಹಾಗೂ ಯುವ ಪತ್ರಕರ್ತ ವಿಜಯಕುಮಾರ ಜಿಡಗಿಯವರು ಭಾಜನರಾಗಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಬಸವರಾಜ ತೋಟದ್ ಸಂತೋಷ ವ್ಯಕ್ತಪಡಿಸಿದರು.

ಕಲಬುರಗಿ ನಗರದಲ್ಲಿ ಪತ್ರಿಕಾ ಪ್ರಕಟಣೆ ತಿಳಿಸಿರುವ ಅವರು, “ಹೋರಾಟಕ್ಕೆ ಹೆಸರುವಾಸಿಯಾದ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಜನಸಿದ ವಿಜಯಕುಮಾರ ಅವರು ಚಿಕ್ಕವಯಸ್ಸಿನಿಂದಲೂ ಹೋರಾಟದ ಕಿಚ್ಚನ್ನು ಬೆಳೆಸಿಕೊಂಡವರಾಗಿದ್ದಾರೆ.‌ ಬಿಎಸ್‌ಸಿ ಪದವಿ ವಿದ್ಯಾಭ್ಯಾಸದ ದಿನಗಳಲ್ಲೇ ಗ್ರಾಮದ ಯುವಕರನ್ನು ಸಂಘಟಿಸಿ ಉಪನ್ಯಾಸ ಮಾಲಿಕೆ, ವಿಚಾರ ಸಂಕಿರಣಗಳು, ಅಧ್ಯಾನ ಶಿಬಿರಗಳನ್ನು ಮಾಡಿ ಜಿಲ್ಲೆಯಲ್ಲಿನ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಹೋರಾಟಗಾರರು ಹಾಗೂ ಸಾಮಾಜಿಕ ಚಿಂತಕರನ್ನು ಕರೆದುಕೊಂಡು ಬಂದು ಗ್ರಾಮದ ಯುವಕರಿಗೆ ಮಹಾಪುರುಷರ ವಿಚಾರಗಳನ್ನು ತಿಳಿಸುವಂತಹ ಕಾರ್ಯಗಳನ್ನು ಮಾಡಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಶೋಷಿತ ಸಮುದಾಯಗಳ ಮೇಲೆ ಅನ್ಯಾಯ, ಅತ್ಯಾಚಾರ ಘಟನೆಗಳಾದಾಗ ಹೋರಾಟಗಳನ್ನು ಮಾಡಿದ್ದಾರೆ. ಜಿಲ್ಲೆಯ ವಿವಿಧ ಸಮುದಾಯದ ಪ್ರಮುಖರನ್ನು ಮಹಾಪುರುಷರ ವಿಚಾರ ವೇದಿಕೆಯಡೆಗೆ ಸೇರಿಸಿ ಕಲಬುರಗಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸದ್ದಿಲ್ಲದೆ ಎಲೆ ಮರೆಕಾಯಿಯಂತೆ ದುಡಿಯುತ್ತಿದ್ದಾರೆ. ಅದರಂತೆ ಪತ್ರಿಕೋದ್ಯಮ ಪದವಿ ಪಡೆದಿದ್ದು, ʼಕಲಬುರಗಿ ಪ್ರಭʼ ಪತ್ರಿಕೆಯ ಸಂಪಾದಕರಾಗಿ ಒಂದು ದಶಕಗಳ ಕಾಲದಿಂದ ಸೇವೆ ಸಲ್ಲಿಸುತ್ತಿದ್ದು, ಸಮಾಜದಲ್ಲಿನ ಮೌಢ್ಯಾಚರಣೆ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವರದಿಗಳನ್ನು ಮಾಡಿ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ l ಸಚಿವ ರಾಜಣ್ಣ ವಿರುದ್ಧ ಅವಹೇಳನ; ವಕೀಲ ದೇವರಾಜೇಗೌಡ ಮಾತಿಗೆ ಕಾಂಗ್ರೆಸ್ ಮುಖಂಡರ ಖಂಡನೆ

“ಅಷ್ಟೇ ಅಲ್ಲದೆ ಅವರು ಶಾಲೆ ವಿದ್ಯಾರ್ಥಿಗಳಿಗೆ ಆರೋಗ್ಯ, ಶೈಕ್ಷಣಿಕ ವಿಷಯದ ಬಗ್ಗೆ ಜಾಗೃತಿ ಕಾರ್ಯಕ್ರಮಗಳು, ವಿವಿಧ ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರಗಳು ಸೇರಿದಂತೆ ನಾನಾ ಸಾಮಾಜಿಕ ಕಾರ್ಯಗಳನ್ನು ಕಲಬುರಗಿ ಪ್ರಭ ಪತ್ರಿಕೆಯ ಮೂಲಕ ಮಾಡಿ ನೊಂದವರ ಧ್ವನಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಾಮಾಜಿಕ ಕಳಕಳಿಯುಳ್ಳ ಕಲಬುರಗಿ ಪ್ರಭ ಪತ್ರಿಕೆಯ ಸಂಪಾದಕ ವಿಜಯಕುಮಾರ ಜಿಡಗಿಗೆ ಕಾಯಕರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವದು ಸಂಸ್ಥೆಯ ಕಿರ್ತಿ ಹೆಚ್ಚುಸುವಂತೆ ಮಾಡಿದೆ” ಎಂದು ಹೇಳಿದರು.

“ಕಲಬುರಗಿಯ ಕನ್ನಡ ಭವನದಲ್ಲಿ ಸೋಮವಾರ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವದು” ಎಂದು ಶ್ರೀದೇವಿ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಛಾಯಾಚಿತ್ರ ಕಲಾ ಸಂಸ್ಥೆ ಮುಖಂಡ ಬಸವರಾಜ ತೋಟದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...