ಕಲಬುರಗಿ | ಮನರೇಗಾ ಬಾಕಿ ಕೂಲಿ ಪಾವತಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೆಲಸ ಮಾಡಿದ ಕೂಲಿಕಾರರ 6 ವಾರಗಳ ಬಾಕಿ ಕೂಲಿ ಬಿಡುಗಡೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಹಾಗೂ ಕೂಲಿಕಾರರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ʼಜಿಲ್ಲೆಯಲ್ಲಿ ಕೆಲಸ ಮಾಡಿದ ನರೇಗಾ ಕಾರ್ಮಿಕರ ಆರು ವಾರಗಳಿಂದ ಬಾಕಿ ಉಳಿಸಿಕೊಂಡ ಹಣ ಕೂಲಿಕಾರರಿಗೆ ಕೊಡಬೇಕು. ಮನರೇಗಾ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಬಿಸಿಲು ಮತ್ತು ತಾಪಮಾನ ಹೆಚ್ಚಾಗಿದ್ದರಿಂದ ಕೆಲಸದ ಅವಧಿಯಲ್ಲಿ ರಿಯಾಯಿತಿ ಕೊಡಬೇಕು. ಕೆಲ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾದಡಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಬೇಕುʼ ಎಂದು ಆಗ್ರಹಿಸಿದರು.

ʼಮನರೇಗಾ ಕೆಲಸದ ಸ್ಥಳದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಬೇಕು. ಜೆಜೆಎಂ ಅಡಿ ಕಳಪೆ ಕಾಮಗಾರಿ ನಡೆಸಿ ನೂರಾರು ಕೋಟಿ ಅವ್ಯವಹಾರ ಎಸಗಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಸಾರ್ವಜನಿಕರು ಎದುರಿಸುತ್ತಿರುವ ನೀರಿನ ಸಮಸ್ಯೆ ತಕ್ಷಣ ಇತ್ಯರ್ಥಗೊಳಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೆಳೆ ಹಾನಿಯಿಂದ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕೂಡಲೇ ಬೆಳೆ ಪರಿಹಾರ ಬಿಡುಗಡೆಗೊಳಿಸಿ ರೈತರ ಆತ್ಮಹತ್ಯೆ ತಡೆಗಟ್ಟಬೇಕು. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಪಶು ವಿಶ್ವವಿದ್ಯಾಲಯ 14ನೇ ಘಟಿಕೋತ್ಸವ : ಆದಿತ್ಯಗೆ 9, ದಕ್ಷೀತ್‌ಗೆ 6, ಎಲೆಕ್ಟ್ರಿಕಲ್ ವ್ಯಾಪಾರಿ ಮಗಳಿಗೆ 4 ಚಿನ್ನದ ಪದಕ

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಸೇರಿದಂತೆ ಪ್ರಮುಖರಾದ ರಾಯಪ್ಪ ಹುರುಮುಂಜಿ, ಚಂದಪ್ಪಾ ಪೂಜಾರಿ, ಶಿವಕುಮಾರ ಸಲಗರ, ದೇವು ಬಿರಾದಾರ, ಮೌನೇಶ ನಾಲವಾರ್‌, ಪ್ರಕಾಶ ಜಾನೆ, ಕ್ಷೇಮಲಿಂಗ, ಶರಣಪ್ಪ, ಸಿದ್ದಮ್ಮಾ ಮುತ್ತಿಗಿ ಸೇರಿ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...