ಕಲಬುರಗಿ | ಅಪಹರಣವಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಪೊಲೀಸರು: ಕೊನೆಗೂ ತಾಯಿಯ ಮಡಿಲಿಗೆ

Date:

ಕಲಬುರಗಿಯ ಜಿಮ್ಸ್ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಿಂದ ನವಜಾತ ಶಿಶುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಮೂವರು ಮಹಿಳೆಯರನ್ನು ಬಂಧಿಸಿದ್ದು, ಮಗುವನ್ನು ಸುರಕ್ಷಿತವಾಗಿ ತಾಯಿ ಮಡಿಲಿಗೆ ಒಪ್ಪಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ತಿಳಿಸಿದರು.

ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಕಸ್ತೂರಿ ರಾಮಕೃಷ್ಣ ದಂಪತಿಗೆ ಸೇರಿದ ಮಗುವನ್ನು ನ.25ರಂದು ಜಿಮ್ಸ್ ಆಸ್ಪತ್ರೆಯಿಂದ ಅಪಹರಿಸಿದ್ದರು. ಕಲಬುರಗಿಯ ಎಂಎಸ್‌ಕೆ ಮಿಲ್ ಸಮೀಪದ ಬಡಾವಣೆಯ ನಿವಾಸಿಗಳಾದ ಉಮೇರಾ ಆವೇಜ್ ಶೇಖ್ (30), ನಸ್ರೀನ್ ಬಾನು ಅಬ್ದುಲ್ ರಹೀಂ ಶೇಖ್ (32) ಹಾಗೂ ಫಾತಿಮಾ ಫಯಾಜ್ ಶೇಖ್ (35) ಬಂಧಿತ ಆರೋಪಿಗಳು. ಈ ಮೂವರು ನರ್ಸ್‌ ಸೋಗಿನಲ್ಲಿ ಆಸ್ಪತ್ರೆಗೆ ಬಂದು ಮಗುವನ್ನು ಅಪಹರಿಸಿದ್ದರು.

ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಲಾಗಿತ್ತು. ಕಳೆದ ಎರಡು ದಿನಗಳ ಸತತ ಶೋಧ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಶರಣಪ್ಪ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಗುವನ್ನು ಕದ್ದು ಪರಾರಿಯಾಗುತ್ತಿದ್ದ ವೇಳೆ ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದ ದೃಶ್ಯಾವಳಿ ಆಧರಿಸಿ ಆರೋಪಿಗಳ ಬೆನ್ನು ಹತ್ತಿದ ಪೊಲೀಸರು, ಕೊನೆಗೂ ಆರೋಪಿಗಳನ್ನು ಬಂಧಿಸಿ ಮಗುವನ್ನು ರಕ್ಷಿಸಿದ್ದಾರೆ. ಈ ಘಟನೆ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್ ಹಾಗೂ ಪ್ರವೀಣ ನಾಯಕ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು ಎಂದು ವಿವರಿಸಿದರು.

ಆರೋಪಿಗಳು ಮಗುವನ್ನು 50 ಸಾವಿರಕ್ಕೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದರು. ಈ ಕುರಿತು ಅವರು ಮುಂಗಡವಾಗಿ 25 ಸಾವಿರ ಹಣ ಕೂಡ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಓರ್ವ ಮಹಿಳೆಗೆ 7 ವರ್ಷದಿಂದ ಮಗು ಆಗಿರುವುದಿಲ್ಲ, ಆಕೆಗೆ ಮಾರಾಟ ಮಾಡಲು ಈ ಮಗುವನ್ನು ಅಪಹರಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬಿಹಾರ ಬೋಧ್‌ ಗಯಾದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು: ಡಾ. ಭಗವಂತ ಅನ್ವಾರ

ಮಗುವಿನ ಅಪಹರಣದ ಮಾಹಿತಿ ಲಭಿಸುತ್ತಿದ್ದಂತೆಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆದಷ್ಟು ಶೀಘ್ರ ಅಪಹೃತ ಮಗುವನ್ನು ಪತ್ತೆ ಮಾಡಿ ಸುರಕ್ಷಿತವಾಗಿ ತಾಯಿಯ ಮಡಿಲಿಗೆ ಸೇರಿಸುವ ವಾಗ್ದಾನ ಮಾಡಿದ್ದರು. ಮೇಲಾಗಿ, ಘಟನೆಗೆ ಸಂಬಂಧಿಸಿದಂತೆ ಶೋಧ ಕಾರ್ಯ ಚುರುಕುಗೊಳಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...