ಕಲಬುರಗಿ | ಕೋಲಿ ಸಮಾಜದ ಸಂಘಟನೆ ಪಕ್ಷಾತೀತವಾಗಿ ಆಗಲಿ: ಭೀಮಣ್ಣ ಸಾಲಿ

Date:

ಚಿತ್ತಾಪುರ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ ಹೇಳಿದರು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆದ ಕೋಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಸಂಬಂಧ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ಸಮಾಜದ ಸಂಘಟನೆ ಬಲಗೊಂಡಾಗ ಮಾತ್ರ ಸಮಾಜಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ಸಮಾಜದ ಪ್ರತಿಯೊಬ್ಬರೂ ರಾಜಕೀಯ ಪಕ್ಷಪಾತ ಬದಿಗಿಟ್ಟು ಸಮಾಜದ ಸಂಘಟನೆಗೆ ಮುಂದಾಗಬೇಕು” ಎಂದು ಹೇಳಿದರು.

“ಕೋಲಿ ಸಮಾಜದ ಪದಾಧಿಕಾರಿಗಳ ಅಧಿಕಾರಾವಧಿ ಮುಗಿದು ಅಧ್ಯಕ್ಷರು ರಾಜೀನಾಮೆ ನೀಡಿ ಎಲ್ಲ ಘಟಕಗಳನ್ನು ವಿಸರ್ಜಿಸಿದ್ದರಿಂದ ಹೊಸ ಪದಾಧಿಕಾರಿ ಆಯ್ಕೆ ಮಾಡಬೇಕಿದೆ. ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮಾಡಲಾಗುವುದು. ಕೆಲವು ಮಾನದಂಡ ಅನುಸರಿಸುವುದು ಅವಶ್ಯಕ. ತಾಲೂಕು ಘಟಕ ಮತ್ತು ನಗರ ಘಟಕದ ಅಧ್ಯಕ್ಷರ ಆಯ್ಕೆ ನಂತರ ಅವರ ನೇತೃತ್ವದಲ್ಲಿಯೇ ಯುವ ಘಟಕದ ಮತ್ತು ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ. ಸಮಾಜದ ಜನರು ಸಹಕರಿಸಬೇಕು ಮತ್ತು ಒಗ್ಗಟ್ಟು ಪ್ರದರ್ಶಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದಾಧಿಕಾರಿ ಆಯ್ಕೆಗೆ ಮಾನದಂಡ: “ಕೋಲಿ ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ಅಧ್ಯಕ್ಷರ ಹುದ್ದೆಗೆ ಆಕಾಂಕ್ಷಿಗಳಾಗುವವರು 40 ರಿಂದ 60 ವರ್ಷದವರಾಗಿರಬೇಕು. ಯುವ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು 30 ರಿಂದ 40 ವರ್ಷದವರಾಗಿರಬೇಕು” ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ, ಸಮಾಜದ ಮಾಜಿ ಅಧ್ಯಕ್ಷ ರಾಮಲಿಂಗ ಬಾನರ್ ಅವರು ಜಂಟಿಯಾಗಿ ತಿಳಿಸಿದ್ದಾರೆ.

“ಪದಾಧಿಕಾರಿಗಳ ಆಯ್ಕೆ ಸಂಬಂಧ ನಡೆದ ಮುಖಂಡರ ಸಭೆಯಲ್ಲಿ ಕೂಲಂಕೂಷವಾಗಿ ಚರ್ಚೆ ನಡೆಸಿ ಕೆಲವು ಮಾನದಂಡಗಳನ್ನು ಅನುಸರಿಸಲೇಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ಸಮಾಜದ ತಾಲೂಕು ಘಟಕ, ನಗರ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು ನವೆಂಬರ್ 28 ರಿಂದ ಡಿಸೆಂಬರ್‌ 5ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕರಣಕುಮಾರ ಅಲ್ಲೂರ್ ಅವರ ಹತ್ತಿರ ನಿಗದಿತ ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು” ಎಂದು ತಿಳಿಸಿದ್ದಾರೆ.

“ಅರ್ಜಿ ಸಲ್ಲಿಸಿದವರ ಪೈಕಿ ಯಾರನ್ನು ಆಯ್ಕೆ ಮಾಡಬೇಕೆಂದು ತಾಲೂಕಿನ ಸಮಾಜದ ಹಿರಿಯ ಮುಖಂಡರು ಪರಾಮರ್ಶೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ಪದಾಧಿಕಾರಿ ಆಯ್ಕೆ ಸಂಬಂಧ ಅರ್ಜಿ ಸಲ್ಲಿಸಿದವರು ತಮ್ಮನ್ನು ಹೊರತುಪಡಿಸಿ ಬೇರೆಯವರ ಹೆಸರು ಹೇಳಲು ಅವಕಾಶವಿರುವುದಿಲ್ಲ. ಯಾವುದೇ ರೀತಿಯ ಗುಂಪುಗಾರಿಕೆ ಯಾರೂ ಮಾಡಬಾರದು. ಸಮಾಜದ ಸಂಘಟನೆಗೆ ಸಹಕರಿಸಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಹೌದು: ಚಿಂತಕ ಬಸವರಾಜ್ ಸೂಳಿಭಾವಿ

ಸಭೆಯಲ್ಲಿ ಮಾಜಿ ಅಧ್ಯಕ್ಷ ರಾಮಲಿಂಗ ಬಾನರ್, ಮಾಜಿ ಗೌರವಾಧ್ಯಕ್ಷ ಹಣಮಂತ ಸಂಕನೂರು, ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ಭೀಮಣ್ಣಾ ಹೋತಿನಮಡಿ, ನಿಂಗಣ್ಣಾ ಹೆಗಲೇರಿ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಸಂಗಾವಿ, ಹಣಮಂತ ಕಟ್ಟಿ, ತಮ್ಮಣ್ಣ ಡಿಗ್ಗಿ, ದಶರಥ ದೊಡ್ಡಮನಿ, ಲಕ್ಷ್ಮಿಕಾಂತ ಸಾಲಿ, ಕರಣಕುಮಾರ ಅಲ್ಲೂರ್, ಚಂದ್ರು ಕಾಳಗಿ, ಪ್ರಭು ಹಲಕರ್ಟಿ, ಮಹಾದೇವ ಇಟಗಾ ಇದ್ದರು.

ವರದಿ : ಸಂತೋಷ ಕುಮಾರ್, ವಾಲೆಂಟಿಯರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...