ಕಲಬುರಗಿ | ಬರಪಡಿತ ಪ್ರದೇಶವೆಂದು ಘೋಷಿಸಿ, ಬರ ಕಾಮಗಾರಿ ಆರಂಭಿಸುವಂತೆ ಒತ್ತಾಯ

Date:

ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ರೈತರ ಜಮೀನಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದ ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಅಲೆಯುವಂತಾಗಿದ್ದು, ಕಾರ್ಮಿಕರು ಪುನಃ ಮಹಾನಗರಗಳಿಗೆ ಕೆಲಸ ಅರಸಿ ಗುಳೆ ಹೋಗುವಂತಹ ಪರಿಸ್ಥಿತಿ ಉದ್ಭವಾಗಿದೆ. ಆದ್ದರಿಂದ ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಬರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂಯು) ಕಾರ್ಯಕರ್ತರು ಕಲಬುರಗಿ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

“ರೈತರ ಸಾಲ ಮನ್ನಾ ಮಾಡಬೇಕು. ₹600ಕ್ಕೆ ಕೂಲಿ ಹೆಚ್ಚಳ ಮಾಡಬೇಕು. ಮನರೇಗಾ ಯೋಜನೆಯಡಿ ಬರಗಾಲ ಕಾಮಗಾರಿ ಆರಂಭಿಸಬೇಕು. ಮನರೇಗಾ ಅಡಿ ಕೆಲಸವನ್ನು 200 ಮಾನವ ದಿನಗಳಿಗೆ ಹೆಚ್ಚಿಸಬೇಕು. ಕೆಲಸ ಹೆಚ್ಚಳ ಮಾಡಬೇಕು”  ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಡಿಯೊ ನೇಮಕಾತಿ ಮಾಡಬೇಕು. ತಪ್ಪಿತಸ್ಥರಿಗೆ ಶಿಸ್ತಿನ ಕ್ರಮ ಜರುಗಿಸುವ ಅಧಿಕಾರ ಜಿಲ್ಲಾ ಪಂಚಾಯಿತಿಗೆ ಕೊಡಬೇಕು. ತೋಟಗಾರಿಕೆ ಇಲಾಖೆ ಮನರೇಗಾ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಮನರೇಗಾ ಯೋಜನೆ ಅಡಿಯಲ್ಲಿ ಅರಣ್ಯ ಕಾಮಗಾರಿ ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಸಂತೆ ಮೈದಾನದಲ್ಲಿ ನಿಂತಿರುವ ಕೊಳಚೆ ನೀರು; ಸ್ಥಳೀಯರ ಆಕ್ರೋಶ

ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಭಿವೃದ್ಧಿ ಅಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಭಿಮಶೆಟ್ಟಿ ಯಂಪಳಿ, ಸಾಯಿಬಣ್ಣ ಗುಡುಬಾ, ಮಲ್ಲಮ್ಮ ಮಗಿ, ದಿಲೀಪ್ ಕುಮಾರ್ ನಾಗೂರೆ, ರಾಯಪ್ಪ ಹುರಮುಂಜಿ ಜಾವೇದ್ ಹುಸೈನ್ ಸುಭಾಷ್ ಹೊಸಮನಿ, ಸಿದ್ದು ಹರವಾಳ, ಕಾಶಿನಾಥ್ ಬಂಡಿ, ಗುರು ಕೋಣಿನ, ಹನಿಫಾ ಬೇಗಂ ಕೋಡದುರು, ಜಾಫರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...