ಕಲಬುರಗಿ | ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಮರೀಚಿಕೆ: ಶಿವಕುಮಾರ ಗೋಲಾ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಆರೋಪ ಮಾಡಿದರು.

ಗ್ರಾಮದ ಹಿಂದುಳಿದ ವರ್ಗ(ಬಿಸಿಎಂ)ಗಳ ಬಾಲಕರ ವಸತಿ ನಿಲಯದಲ್ಲಿ ಸುಮಾರು ಐವತ್ತು(50) ವಿದ್ಯಾರ್ಥಿಗಳಿದ್ದು, ಮೂಲ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮಲಗುವುದಕ್ಕೆ ಮಂಚ, ಬೆಡ್ ವ್ಯವಸ್ಥೆ ಕಲ್ಪಪಿಸಿಕೂಟ್ಟಿಲ್ಲ. ಅಲ್ಲದೆ ವಸತಿ ನಿಲಯದ ಕಿಟಕಿ ಬಾಗಿಲುಗಳು ಮುರಿದು ಬಿದ್ದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಸಿಎಂ ಹಾಸ್ಟೆಲ್‌

ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಾಂಪೌಂಡ್ ಗೋಡೆ ಇಲ್ಲದಿರುವುದರಿಂದ ಸಾರ್ವಜನಿಕರು ಗುಟಕಾ, ವಿಮಲ್ ತಿಂದು ಉಗುಳಿರುವುದರಿಂದ ನಿಲಯದ ಗೋಡೆಗಳು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿವೆ. ಸರಿಯಾದ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಿಸಿಎಂ ಹಾಸ್ಟೆಲ್‌ 1

“ವಿದ್ಯಾರ್ಥಿಗಳ ಸಮಸ್ಯೆ ಒಂದು ಕಡೆಯಾದರೆ, ಮೇಲ್ವಿಚಾರಕರು ಆರು(6) ತಿಂಗಳಿಗಳಿಗೊಮ್ಮೆ ವರ್ಗಾವಣೆಯಾಗುತ್ತಾರೆ. ಮೇಲ್ವಿಚಾರಕರು ಯಾರು ಎಂಬುದೇ ತಿಳಿಯುವುದಿಲ್ಲ. ಅಲ್ಲದೆ ಹಾಸ್ಟೆಲ್ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಯಾರೂ ಮಾಡು‌ತ್ತಿಲ್ಲ. ಒಬ್ಬರು ವಾರ್ಡನ್, ಇಬ್ಬರು ಕೂಲಿ ಆಳುಗಳ ಮುಖಾಂತರ ಕೆಲಸ ಮಾಡಿಸಲಾಗುತ್ತಿದೆ. ಅವರೂ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಭಿವ್ಯಕ್ತಿಗೆ ಪೂರಕವಾದ ವಾತಾವರಣ ನಿರ್ಮಿಸುವುದೇ ಸ್ವಾತಂತ್ರ್ಯ: ಕೆ ವಿ ನಾಗರಾಜಮೂರ್ತಿ

“ಆಂದೋಲಾ ಜಿಲ್ಲಾ ಪಂಚಾಯತ್ ಕ್ಷೇತ್ರವಾಗಿದೆ. ಬಿಸಿಎಂ ವಸತಿ ನಿಲಯ ಈ ವ್ಯಾಪ್ತಿಗೆ ಸೇರಿದರೂ ಅಧಿಕಾರಿಗಳು ನಿಷ್ಕಾಳಜಿ ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ, ತಾಲೂಕು ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ದಲಿತ ಸೇನೆ ಸಂಘಟನೆಯಿಂದ ಹಿಂದುಳಿದ ವರ್ಗಗಳ ಕಚೇರಿ ಎದುರು ತೀವ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...