ಕಲಬುರಗಿ | ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ; ಉಚಿತವಾಗಿ ಮುಟ್ಟಿನ ಕಪ್‌ ವಿತರಣೆ

Date:

ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಮುಟ್ಟಿನ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಆರೋಗ್ಯ, ನೈರ್ಮಲ್ಯ, ಘನತೆ ಮತ್ತು ಸಬಲೀಕರಣ ಸಾಧಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪ್ರೇರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ 1.57 ಕೋಟಿ ರೂ. ಹಾಗೂ ಕೆಕೆಆರ್‌ಡಿಬಿ ವತಿಯಿಂದ 2.01 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯಲ್ಲಿ 1.03 ಲಕ್ಷ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಆಶಾಕಿರಣ ಯೋಜನೆಯಡಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಒಟ್ಟು 1.12 ಕೋಟಿ ಜನರ ಕಣ್ಣು ಪರೀಕ್ಷೆ ಮಾಡುವ ಗುರಿಹೊಂದಿದ್ದು, ಪರೀಕ್ಷೆ ಮಾಡಿಸಿದವರಲ್ಲಿ ಅಗತ್ಯ ಇರುವವರಿಗೆ ಈಗಾಗಲೇ 3.32 ಲಕ್ಷ ಕನ್ನಡಕ‌ ವಿತರಣೆ ಮಾಡಲಾಗಿದೆ ಎಂದರು.

ಕಲಬುರಗಿ ಜಿಲ್ಲೆಯೊಂದರಲ್ಲೇ ಸ್ಕ್ರೀನಿಂಗ್‌ ಒಳಪಟ್ಟ  21 ಲಕ್ಷ ಜನರಲ್ಲಿ, ಅಗತ್ಯವಿರುವ 75,200 ಜನರಿಗೆ ಸರ್ಜರಿ  ಮಾಡಲಾಗಿದ್ದು, ಇದಕ್ಕಾಗಿ ₹ 61 ಕೋಟಿ ವೆಚ್ಚ ಭರಿಸಲಾಗಿದೆ. ಮುಂದಿನ ದಿನಗಳಲ್ಲಿ ಯಾದಗಿರಿ ಸೇರಿದಂತೆ ಮತ್ತೆ ಎಂಟು ಜಿಲ್ಲೆಗಳಿಗೆ ಈ ಕಾರ್ಯಕ್ರಮ ವಿಸ್ತರಿಸುವ ಆಲೋಚನೆ ಇದೆ. ಒಟ್ಟಾರೆ ರಾಜ್ಯದಲ್ಲಿ ಪ್ರತಿಯೊಬ್ಬರು ತಮ್ಮ ಕಣ್ಣುಗಳ ರಕ್ಷಣೆಗೆ ಬೇಕಾಗುವ ತಪಾಸಣೆ ಹಾಗೂ ಸರ್ಜರಿಗೆ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡು ರಾವ್, ಡಾ. ಅಜಯ್ ಸಿಂಗ್, ಅಲ್ಲಮಪ್ರಭು ಪಾಟೀಲ್, ಕಲಬುರಗಿ ಜಿಲ್ಲಾಧಿಕಾರಿ, ಖಾನಿಜ್ ಫಾತಿಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...