ಕಲಬುರಗಿ | ವಿದ್ಯುತ್ ದರ ಏರಿಕೆ ಹಿಂಪಡೆಯಿರಿ; ಲಕ್ಷ್ಮಣ ದಸ್ತಿ ಒತ್ತಾಯ

Date:

ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಇಆರ್‌ಸಿ ನಿಗದಿಪಡಿಸಿದ ವಿದ್ಯುತ್ ದರ ಏರಿಕೆಯನ್ನು ಈಗಿನ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಏಕೆ ಒಪ್ಪಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ‌ಯ ಲಕ್ಷ್ಮಣ ದಸ್ತಿ ಪ್ರಶ್ನಿಸಿದ್ದಾರೆ.

“ಸಿದ್ಧರಾಮಯ್ಯ ನೇತೃತ್ವದ ನೂತನ ಸರ್ಕಾರ ಹಿಂದಿನ ಸರ್ಕಾರದ ಆಡಳಿತ ವಿರೋಧಿ ಅಲೆ ಮತ್ತು ಕಾಂ‌ಗ್ರೆಸ್‌ನ ಐದು ಜನಪರ ಗ್ಯಾರಂಟಿಗಳ ಭರವಸೆಗಳಿಂದ ಅಧಿಕಾರಕ್ಕೆ ಬಂದಿರುವುದು ಸಂತೋಷದ ವಿಷಯ. ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ, ಅನೇಕ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಮತ್ತು ಹಿಂದಿನ ಸರ್ಕಾರದ ಕೆಲವೊಂದು ತಪ್ಪು ನಿರ್ಧಾರಗಳನ್ನು ಹಿಂಪಡೆದಿರುವುದು ಸ್ವಾಗತಾರ್ಹ” ಎಂದು ಅಭಿಪ್ರಾಯಪಟ್ಟರು.

“ಅವೈಜ್ಞಾನಿಕ ಮಾದರಿಯ ಕೆಇಆರ್‌ಸಿ ನಿಗದಿಪಡಿಸಿದ ಜನವಿರೋಧಿ ದರಗಳನ್ನು ನೂತನ ಕಾಂಗ್ರೆಸ್ ಸರ್ಕಾರ ತಕ್ಷಣ ಹಿಂಪಡೆದು ಜನರ ಧ್ವನಿಗೆ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ, ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿಗಳು ಈ ಒಂದು ತಪ್ಪಿನಿಂದ ಸರ್ಕಾರ ಜನವಿರೋಧಿ ಎಂಬ ಪಟ್ಟ ಕಟ್ಟಿಕೊಂಡಂತಾಗುತ್ತದೆ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಇಆರ್‌ಸಿ ಅವೈಜ್ಞಾನಿಕ ರೀತಿಯಲ್ಲಿ ದರ ಏರಿಕೆ ಮಾಡಿದೆ. ಹಿಂದೆ ಮೂರು ಸ್ಲ್ಯಾಬ್‌ಗಳಂತೆ ಯುನಿಟ್‌ವಾರು ದರ ಇದ್ದರೆ, ಈಗ ಕೇವಲ ಎರಡು ಸ್ಲ್ಯಾಬ್‌ಗಳಲ್ಲಿ ವಿದ್ಯುತ್ ದರ ನಿಗದಿ ಮಾಡಲಾಗಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತದೆ. ಅಲ್ಲದೆ, ಕೈಗಾರಿಕಾ ವಲಯದಲ್ಲಿ ಈ ದರ ಏರಿಕೆಯಿಂದ ಬೇರೆ ವಸ್ತುಗಳ ದರವೂ ಸಹಜವಾಗಿಯೇ ಏರಿಕೆಯಾಗುತ್ತವೆ. ನೂತನ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಇಆರ್‌ಸಿಯ ಜನ ವಿರೋಧಿ ವಿದ್ಯುತ್ ದರ ನೀತಿಯನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

“ಕೆಇಆರ್‌ಸಿ ಸರ್ಕಾರದ ಆದೇಶದಂತೆ ನಡೆಯುವ ಒಂದು ಸಂಸ್ಥೆಯಾಗಿರುವುದರಿಂದ ಸರ್ಕಾರ ಕೆಇಆರ್‌ಸಿಯ ನಿರ್ಧಾರದ ನೆಪ ಹೇಳದೆ ತನ್ನ ದಿಟ್ಟತನವನ್ನು ಪ್ರದರ್ಶಿಸಿ ಕೂಡಲೇ ವಿದ್ಯುತ್ ದರ ಇಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಬ್ಬೂರು ಗ್ರಾಮದ ಸಂಪರ್ಕ ರಸ್ತೆ ತೆರವುಗೊಳಿಸುವಂತೆ ಆಗ್ರಹ

“ಜೂನ್ ತಿಂಗಳ ವಿದ್ಯುತ್ ಬಿಲ್ ಪಾವತಿಗೆ ಸಂಬಂಧಿಸಿ ಬಹುತೇಕ ಗ್ರಾಹಕರು ಬಿಲ್ ಪಾವತಿಸದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. ಗ್ರಾಹಕರು ಸರ್ಕಾರ ವಿದ್ಯುತ್ ಬಿಲ್ ಹಿಂಪಡೆಯುವವರೆಗೆ ವಿದ್ಯುತ್ ಬಿಲ್ ಪಾವತಿಸದೇ ಪ್ರತಿಭಟನೆ ವ್ಯಕ್ತಪಡಿಸಬೇಕು. ಇದರಿಂದ ಸರ್ಕಾರಕ್ಕೂ ಜನರ ನೋವು ಗೊತ್ತಾಗುತ್ತದೆ. ಈ ಹಿನ್ನಲೆಯಲ್ಲಿ ಗ್ರಾಹಕರ ಸಭೆ ನಡೆಸಿ ಸರ್ಕಾರಕ್ಕೆ ಒತ್ತಡ ತರಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ನಿರ್ಧರಿಸಿದೆ” ಎಂದು ತಿಳಿಸಿದರು.

“ಈ ವಿಷಯಕ್ಕೆ ಸಂಬಂಧಿಸಿ ಗ್ರಾಹಕರು ಮೊಬೈಲ್ ಸಂಖ್ಯೆ 9342659766ಗೆ ಸಂಪರ್ಕಿಸಿ ಸಮಿತಿ ಹಮ್ಮಿಕೊಂಡಿರುವ ಮುಂದಿನ ರೂಪುರೇಷೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಸಂಘಟಿತವಾಗಿ ಸರ್ಕಾರಕ್ಕೆ ಒತ್ತಡ ತರಲು ವಿನಂತಿಸುತ್ತದೆ”‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...