ಕಲಬುರಗಿ | ವೇತನ ಸಿಗದಿದ್ದಕ್ಕೆ ಬೇಸರ: ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

Date:

ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ಭಾಗ್ಯಶ್ರಿಗೆ ಕಳೆದ ಏಳು ತಿಂಗಳಿಂದ ಸಂಬಳ ಸಿಗದೆ ಇದ್ದ ಕಾರಣ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಡೆತ್ ನೋಟು ಬರೆದು ಗ್ರಂಥಾಲಯದ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ” ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಳಖೇಡದ ಪ್ರಮುಖ ರಸ್ತೆಯನ್ನು ತಡೆದ ಗ್ರಾಮಸ್ಥರು ನ್ಯಾಯಕ್ಕಾಗಿ ಆಗ್ರಹಿಸಿ, ಧರಣಿ ಕೂತಿದ್ದಾರೆ.

1002676037

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇಡಂ ಪಿಎಸ್‌ಐ ಕುಪೇಂದ್ರ, ಡಿಎಸ್‌ಪಿ ಮಠಪತಿ, ಹಾಗೂ ಮಳಖೇಡ ಠಾಣೆಯ ಪಿಎಸ್‌ಐ ಸಂಗಮೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

1002676035

ಈದಿನ.ಕಾಮ್ ಮಳಖೇಡ ಪಿಎಸ್‌ಐ ಸಂಗಮೇಶ ಅವರನ್ನು ಸಂಪರ್ಕಿಸಿದಾಗ, “ ನಾನು ಘಟನಾ ಸ್ಥಳದಲ್ಲಿರುವೆ ಸ್ವಲ್ಪ ಸಮಯದ ಬಳಿಕ ಮಾತನಾಡುತ್ತೇನೆ” ಎಂದು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...