ಕಲಬುರಗಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಲಬುರಗಿ ಹೊರವಲಯದ ಸುಲ್ತಾನಪುರ ಗ್ರಾಮದ ನಿವಾಸಿ ಸೂರ್ಯಕಾಂತ (35) ಆತ್ಮಹತ್ಯೆ ಮಾಡಿಕೊಂಡವರು.
ಸ್ವಂತ ವ್ಯಾಪಾರಿ ಅಂಗಡಿಯಲ್ಲಿ ಬೆಳೆ ಖರೀದಿ ಮಾಡುತ್ತಿದ್ದರು. ವ್ಯವಹಾರದಲ್ಲಿ ನಷ್ಟ ಉಂಟಾಗಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಎರಡನೇ ಜಾಮೀನು ಅರ್ಜಿಯೂ ವಜಾ





