ಕಲಬುರಗಿ | ಡಾ ಅಜಯಸಿಂಗ್‌, ಡಿಕೆಶಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಸಜ್ಜು

Date:

ಕೆಬಿಜೆಎನ್‌ಎಲ್ ಬೋರ್ಡ್‌ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್‌ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿ ಸದಸ್ಯ ಡಾ. ಮಹೇಶಕುಮಾರ್ ರಾಠೋಡ್ ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕಳೆದ ನಾಲ್ಕು ದಶಕದ ಹೋರಾಟದ ಪ್ರತಿಫಲವಾಗಿ ಆರಂಭಗೊಂಡಿರುವ ಮಲ್ಲಾಬಾದ ಏತ ನೀರಾವರಿ ಯೋಜನೆಯ ಕಾಮಗಾರಿ ಸರ್ಕಾರದ ಅಧಿಕಾರಿಗಳ ಹಾಗೂ ಶಾಸಕರ ಬೇಜವಾಬ್ದಾರಿತನದಿಂದಾಗಿ ಸ್ಥಗಿತಗೊಂಡಿತ್ತು. ಸ್ಥಗಿತಗೊಂಡಿರುವ ಮಲ್ಲಾಬಾದ್ ಏತ ನೀರಾವರಿ ಕಾಮಗಾರಿಗಳ ಟೆಂಡರ್ ಕರೆದು ಕೆಲಸ ಪ್ರಾರಂಭಿಸ‌ಬೇಕೆಂದು ನಡೆಸಿದ ನಿರಂತರ ಹೋರಾಟ ಮಾಡಲಾಗಿದೆ. ಇದರ ಪ್ರತಿಫಲವಾಗಿ 202324ನೇ ಸಾಲಿನ ದರಗಳಂತೆ ಮಲ್ಲಾಬಾದ ಏತ ನೀರಾವರಿಯ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹327 ಕೋಟಿ ರೂಪಾಯಿಗಳ ಅನುಮೋದನೆ ದೊರೆತಿದೆ. ಆದರೂ ಪ್ರಸ್ತುತ ಸರ್ಕಾರ ಕಾಮಗಾರಿ ಪ್ರಾರಂಭಿಸದೆ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಈಗ ಅದೇ ಕೆಲಸಕ್ಕೆ ₹359.67 ಕೋಟಿ ರೂಪಾಯಿಗಳು ಬೇಕಾಗಿದೆ. ಅಧಿಕಾರಿಗಳ ಮತ್ತು ಶಾಸಕರ ನಿರ್ಲಕ್ಷ್ಯದಿಂದ ಸರ್ಕಾರದ ‌ಬೊಕ್ಕಸಕ್ಕೆ ಹೆಚ್ಚುವರಿಯಾಗಿ ₹32.67 ಕೋಟಿ ಹೊರೆಯಾಗಿದೆ” ಎಂದರು.

“ಮಾರ್ಚ್ 8ರಂದು ಜೇವರ್ಗಿಗೆ ಆಗಮಿಸುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ ಅವರು ಕೆಬಿಜೆಎನ್‌ಎಲ್‌ ಬೋರ್ಡ್‌ ಸಭೆಯ ನಡಾವಳಿಗಳನ್ನು ಮತ್ತು ಮಲ್ಲಾಬಾದ ಏತ ನೀರಾವರಿ ಯೋಜನೆ ವ್ಯಾಪ್ತಿಯ ಬಾಕಿ ಕಾಮಗಾರಿಗಳ ಟೆಂಡ‌ರ್ ಆದೇಶ ಪ್ರತಿಗಳನ್ನು ಮಲ್ಲಾಬಾದ ಏತ ನೀರಾವರಿ ಹೋರಾಟ ಸಮಿತಿಯ ನಿಯೋಗದೊಂದಿಗೆ ಸಭೆ ನಡೆಸಿ ರೈತ ಹೋರಾಟಗಾರರಿಗೆ ಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲಾದ್ಯತ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

“ಜೇವರ್ಗಿ ತಹಶೀಲ್ದಾರರು ಮದ್ಯಪ್ರವೇಶ ಮಾಡಿ ನಿರಾವರಿ ಸಚಿವರ ಜತೆಗೆ ರೈತರ ನಿಯೋಗದ ಮಾತುಕತೆಗೆ ಅವಕಾಶ ಮಾಡಿಕೊಡಬೇಕು. ಒಂದು ವೇಳೆ ಸದರಿ ಆದೇಶ ಪ್ರತಿಗಳನ್ನು ತರದೇ ಮಲ್ಲಾಬಾದ ಏತ ನೀರಾವರಿ ಹೋರಾಟ ಸಮಿತಿಯ ಮೂಲಕ ನಡೆಸಲಾಗುತ್ತಿರುವ ರೈತ ಹೋರಾಟವನ್ನು ಕಡೆಗಣಿಸಿ ಜೇವರ್ಗಿ ಮತ ಕ್ಷೇತ್ರದ ರೈತರಿಗೆ ಮತ್ತು ರೈತ ಹೋರಾಟಕ್ಕೆ ನಿರ್ಲಕ್ಷ್ಯ ಮಾಡಿದರೆ, ಇದೇ ತಿಂಗಳು ಮಾರ್ಚ್ 08ರಂದು ಜೇವರ್ಗಿಗೆ ಆಗಮಿಸುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರೂ ಆದ ಡಿ ಕೆ ಶಿವಕುಮಾರ್‌ ಮತ್ತು ನಮ್ಮ ಕ್ಷೇತ್ರದ ರೈತರ ಅಭಿವೃದ್ಧಿ ಕಡೆಗಣಿಸುತ್ತಿರುವ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಡಾ. ಅಜಯಸಿಂಗ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ಗೋಷ್ಠಿಯಲ್ಲಿ ಬಾಬು ಬಿ ಪಾಟೀಲ್, ಇಬ್ರಾಹಿಂ ಪಟೇಲ್ ಯಾಳವಾರ, ಮಾಂತಗೌಡ ನಂದಿಹಳ್ಳಿ, ಮಹಮ್ಮದ್ ಚೌದ್ರಿ ಕೊಡಚಿ,‌ ಬಿ ಎಸ್ ಮಾಲಿಪಾಟಿಲ್, ರಾಜಾ ಪಟೇಲ್ ಯಾಳವಾರ, ಗುರನಾಥ ಸಾಹು ರಾಜವಾಳ, ವಜೀರ ಪಟೇಲ ಸಿಗರತಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...