ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆಗೈದ ಘಟನೆ ಶನಿವಾರ ರಾತ್ರಿ ಕಲಬುರಗಿಯ ಮಿಲ್ಲತ್ ನಗರದ ಸಮೀಪ ನಡೆದಿದೆ
ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಗಳು ಪರಾರಿಯಾಗಿದ್ದು, ರಿಯಲ್ ಎಸ್ಟೇಟ್ ಕಾರಣಕ್ಕೆ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಕೊಲೆಯಾದ ವ್ಯಕ್ತಿ ಎಂ.ಡಿ ಬಿಲಾಲ್ (ಸುರೇಶ) ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಕಲಬುರಗಿ | ಅಪಘಾತದಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ





