ಕಲಬುರಗಿ | ಮಾರುತಿ ಮಾನಪಡೆ 70ನೇ ಜನ್ಮದಿನ : ನೋಟ್‌ಬುಕ್, ಪೆನ್ ವಿತರಣೆ

Date:

ರೈತ, ಕಾರ್ಮಿಕರ ಹೋರಾಟಗಾರ ದಿವಂಗತ ಮಾರುತಿ ಮಾನಪಡೆ ಅವರ 70ನೇ ಜನ್ಮದಿನದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧೆಡೆ ಹಲವು ಅವರ ಅಭಿಮಾನಿಗಳ ಬಳಗ, ನೀರು ಸರಬರಾಜು ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘಟನೆಗಳ ನೇತೃತ್ವದಲ್ಲಿ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದರು.

ಅಂಬಲಗಾ ಗ್ರಾಮದ ಅವರ ಸಮಾಧಿ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಮಲಾಪುರ ಕಸಾಪ ಅಧ್ಯಕ್ಷ ಸುರೇಶ ಲೇಂಗಟಿ ಹಾಗೂ ಭೀಮಶಾ ದಂಡಗುಲಕರ್, ಬಸವರಾಜ ಸರಡಗಿ, ಸೋಮಶೇಖರ್ ಸಿಂಗೆ ಬಂಡಯ್ಯ ಸ್ವಾಮಿ ಇತರರು ಭಾಗವಹಿಸಿದ್ದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್ ಜಿ.ಶಟಗಾರ, ಜಿಲ್ಲಾ ರೈತ ಕಾರ್ಮಿಕ ಸಂಘದ ಮುಖಂಡ ಚಂದು ಜಾಧವ, ನಾರಾಯಣ ರಂಗದಾಳ, ನಾಗರಾಜ ಗೋಗಿ, ಅನಿಲ ಮಂಗಾ, ಥಾವರು ರಾಠೋಡ , ಸಮೀರ್ ಪಾಷಾ ಇತರರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಾಟಗೆ ಲೇ ಔಟ್ ಶಿವಾಜಿ ಪಾರ್ಕ್ ಬಳಿಯಿರುವ ವೃದ್ಧಾಶ್ರಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ರೈತ ಕಾರ್ಮಿಕ ಸಂಘದ ಗೌರವ ಅಧ್ಯಕ್ಷ ಶಾಂತಪ್ಪ ಪಾಟೀಲ, ರಾಘವೇಂದ್ರ ಅವರಾದಕರ್, ಪ್ರಕಾಶ ಬಬಲಾದ ಶಿವಕುಮಾರ್ ಮರತುರಕರ್, ಇದ್ದರು.

ನೃಪತುಂಗ ಕಾಲೋನಿ ಬಳಿಯಿರುವ ಬುಡ್ಗ ಜಂಗಮ ಕಾಲೋನಿಯಲ್ಲಿ ಸುಮಾರು 400 ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಾಹಿತಿ, ಪತ್ರಕರ್ತ ಡಾ.‌ ಶಿವರಂಜನ್ ಸತ್ಯಂಪೇಟೆ, ಮಕ್ಕಳ ಹಕ್ಕುಗಳ ಹೋರಾಟಗಾರ ವಿಠ್ಠಲ ಚಿಕಣಿ, ಪತ್ರಕರ್ತ ಚಂದ್ರಶೇಖರ ಕವಲಗಾ, ಸುಂದರ ರಾಷ್ಟ್ರ ಪ್ರತಿಷ್ಠಾನದ ಸಂಜುಕುಮಾರ್ ಕಾಂಬಳೆ, ಸಾಮಾಜಿಕ ಕಾರ್ಯಕರ್ತ ಮೈಲಾರಿ ದೊಡ್ಡಮನಿ, ಮಹೇಶ ಚೌಕಿಮಠ, ಪುಂಡಲೀಕ ಮೋಸಲಗಿ ಇತರರಿದ್ದರು.

ಕಮಲಾಪುರ ತಾಲೂಕ ಕೇಂದ್ರದಲ್ಲಿ ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ ರೇವಪ್ಪ ಓಕಳಿ, ದುರ್ಗಪ್ಪ ಚೇಂಗಟಾ, ಸುಭಾಷ ಹೊಸಮನಿ , ಚಿದಾನಂದ ಸೋಂತ, ರಮೇಶ ರಾಠೋಡ, ಸೋಮಶೇಖರ್, ಸುನೀಲ್ ಮಾನ್ಪಡೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...