ಕಲಬುರಗಿ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನಾ ರ್‍ಯಾಲಿ

Date:

ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ರವಿವಾರ ಕಲಬುರಗಿ ನಗರದಲ್ಲಿ ರವಿವಾರ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ನಗರೇಶ್ವರ್ ಶಾಲೆಯಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ನೆಹರು‌ ಗಂಜ, ಕಿರಾಣಾ ಬಜಾರ್, ಸೂಪರ್ ಮಾರ್ಕೆಟ್ ಮಾರ್ಗವಾಗಿ ಜಗತ್ ವೃತ್ತದವರೆಗೆ ಜರುಗಿತು.

ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಜನರು ವಕ್ಫ್ ತಿದ್ದುಪಡಿ ಕಾಯಿದೆ 2025ರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ, ಕೆಎಸ್‌ಐಸಿ ಅಧ್ಯಕ್ಷೆ ಕನೀಜಾ ಫಾತೀಮಾ ಮಾತನಾಡಿ, ‘ಕೇಂದ್ರ ಸರ್ಕಾರ ಜಾರಿಗೊಳಿಸಿದ ವಕ್ಫ್ ಕಾಯ್ದೆ 2025 ಅನ್ನು ಕೂಡಲೇ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಸಿಎಎ – ಎನ್ಆರ್‌‌ಸಿ ರೀತಿಯಲ್ಲಿ ನಿರಂತರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

WhatsApp Image 2025 04 28 at 7.00.59 AM
ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿದರು.

‘ದೇಶದಲ್ಲಿ ಜಾರಿಯಾಗುತ್ತಿರುವ ವಕ್ಫ್ ಕಾಯ್ದೆ ಅಸಂವಿಧಾನಿಕವಾಗಿದೆ. ಇದು ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ವಿರೋಧಿ ಕಾಯ್ದೆಯಾಗಿದೆ. ಒಂದು ವೇಳೆ ಕೇಂದ್ರ ಸರಕಾರ ಇದನ್ನು ಹಿಂಪಡೆಯದಿದ್ದರೆ ದೇಶದಾದ್ಯಂತ ದಿಲ್ಲಿಯ ಶಾಹೀನ್ ಭಾಗ್ ರೀತಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ’ ಎಂದರು.

ಖ್ವಾಜಾ ಬಂದಾ ನವಾಜ್ ದರ್ಗಾದ ಸಜ್ಜಾದಾನಶೀನ್ ಮತ್ತು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಸಾಬ್ ಮಾತನಾಡಿ, ‘ವಿವಾದಿತ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯಬೇಕು. ಹಿಂಪಡೆಯುವ ಮಾತುಗಳು ಕೇಳದಿದ್ದರೆ ಈ ರೀತಿಯ ಬೃಹತ್ ಪ್ರಮಾಣದಲ್ಲಿ ಹೋರಾಟಗಳು ನಿತ್ಯವೂ ನಡೆಯಲಿವೆ. ಕಾಯ್ದೆ ರದ್ದತಿ ಆಗುವವರೆಗೂ ಹೋರಾಟ ನಿಲ್ಲುವುದಿಲ್ಲʼ’ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಸವ ಜಯಂತಿ ದಿನ ರೇಣುಕಾಚಾರ್ಯ ಜಯಂತಿ ಆಚರಣೆ; ಸುತ್ತೋಲೆ ಹಿಂಪಡೆದ ಅಖಿಲ ಭಾರತ ವೀರಶೈವ ಮಹಸಭಾ

ಪ್ರತಿಭಟನೆಯಲ್ಲಿ‌ ಶೈಖ್ ಶಾ ಮುಹಮ್ಮದ್ ಅಫ್ಜಲುದ್ದೀನ್ ಜುನೈದಿ ಸಾಬ್, ಫರಾಜ್ ಉಲ್ ಇಸ್ಲಾಂ, ಡಾ. ಸಯ್ಯದ್ ಮುಸ್ತಫಾ ಅಲ್ ಹುಸೈನಿ ಸಾಬ್, ಸಯ್ಯದ್ ಅಖೀಬ್ ಹುಸೈನಿ ಸಾಬ್, ನಜಾರ್ ಮೊಹಮ್ಮದ್ ಬಾಬಾ ಖಾನ್, ಮಾಜಿ ಕೆಯುಡಿಎ ಅಧ್ಯಕ್ಷರಾದ ಮೊಹಮ್ಮದ್ ಅಸ್ಗರ್ ಚುಲ್ಬುಲ್, ಶರೀಫ್ ಮಝ್ಹರಿ ಸಾಬ್, ಅಹ್ಮರ್ ಉಲ್ ಇಸ್ಲಾಂ, ಅಡ್ವೊಕೇಟ್ ವಹಾಜ್ ಬಾಬಾ, ಪ್ರಸ್ತುತ ಕೆಯುಡಿಎ ಅಧ್ಯಕ್ಷರಾದ ಮಝ್ಹರ್ ಆಲಂ ಖಾನ್, ಆರಿಫ್ ಖಾನ್, ಕೆ.ನೀಲಾ, ಮೀನಾಕ್ಷಿ ಬಾಳಿ, ಮೌಲಾ ಮುಲ್ಲಾ, ಮುಬೀನ ಅಹ್ಮದ್ ಸೇರಿದಂತೆ ಧಾರ್ಮಿಕ ಪಂಡಿತರು, ಸೂಫಿ ಮಹಾನುಭಾವರು, ಉದ್ಯಮಿಗಳು ಮತ್ತು ಸಾವಿರಾರು ಸಾಮಾನ್ಯ ನಾಗರಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...