ಕಲಬುರಗಿ | ಜನರಿಗೆ ನ್ಯಾಯಯುತ ಸೇವೆ ಒದಗಿಸಿ; ಅಧಿಕಾರಿಗಳಿಗೆ ಸಚಿವ ರಾಜಣ್ಣ ಸೂಚನೆ

Date:

ಸಹಕಾರ ಸಂಘಗಳ ಕಾಯ್ದೆ-1959 ಮತ್ತು ನಿಯಮಾವಳಿಗಳು-1960ನ್ನು ಸಹಕಾರ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜನತೆಗೆ ನ್ಯಾಯಯುತ ಸೇವೆ ಒದಗಿಸಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ಕಲಬುರಗಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಸಹಕಾರ ದಾವೆ ಮತ್ತು ಅಮಲ್ದಾರಿ ಪ್ರಕರಣಗಳ ಕಾರ್ಯಾಗಾರ ಉದ್ಫಾಟಿಸಿ ಅವರು ಮಾತನಾಡಿದರು. “ಪರಿಪೂರ್ಣ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವು ಸಹಕಾರ ಅಧಿಕಾರಿಗಳಿಗೆ ಅನುಕೂಲಕರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಲಿಯುವುದಕ್ಕೆ ಅಂತ್ಯವಿಲ್ಲವೆಂದು ಭಾವಿಸಿದ್ದೇನೆ. ಕಲಿಕೆ ಒಂದು ನಿರಂತರ ಪ್ರಕಿಯೆಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಸದುಪಯಗೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶಗಳನ್ನು ಕ್ರೂಢೀಕರಿಸಿ ವಿತರಿಸಲಾಗುತ್ತದೆ. ಆದಿಕಾರಿಗಳು ಅವುಗಳನ್ನು ಅಧ್ಯಯನ ಮಾಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ. ರಾಜೇಂದ್ರ ಮಾತನಾಡಿ, “ಕಲಬುರಗಿ ಸೇರಿ ಎರಡು ವಿಭಾಗಗಳಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನದಲ್ಲಿ ಇನ್ನೆರಡು ವಿಭಾಗಗಳಲ್ಲಿ ಕಾರ್ಯಾಗಾರ ನಡೆಸಲಾಗುವುದು” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಅಪರ ನಿಬಂಧಕಿ ಆಶಾ, ಬಾಲಶೇಖರ, ಲಿಂಗರಾಜು, ಜಂಟಿ ನಿಬಂಧಕರುಗಳಾದ ಮಹೇಶ, ಕಲ್ಲಪ್ಪ ಒಬಣಗೋಳ, ಜಯಪ್ರಕಾಶ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಡಿ.ನರಸಿಂಹಮೂರ್ತಿ, ಆಪ್ತ ಕಾರ್ಯದರ್ಶಿ ವೆಂಕಟೇಶ ಸೇರಿದಂತೆ ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...