ಕಲಬುರಗಿ | ₹1.76 ಕೋಟಿ ಅನಿರ್ಬಂಧಿತ ಅನುದಾನದ ದುರ್ಬಳಕೆ; ತನಿಖೆಗೆ ದಲಿತ ಸೇನೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ 2023-24ನೇ ಸಾಲಿನ ತಾಲೂಕು ಪಂಚಾಯತ್ ಯೋಜನೆಗಳಾದ ಅನಿ‌ರ್ಬಂಧಿತ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಂಚೋಳಿ ನಗರದ ತಾಂಡುರ್ ಕ್ರಾಸ್‌ನಿಂದ ತಹಶೀಲ್ದಾರ್‌ ಕಚೇರಿವರಗೆ ದಲಿತ ಸೇನೆ ಸಮಿತಿಯಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಮುಖಾಂತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದರು.‌

ಯುವಮೋರ್ಚಾ ತಾಲೂಕು ಅಧ್ಯಕ್ಷ ಚೇತನ್ ನಿರಾಳಕರ್ ಮಾತನಾಡಿ, “ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಂಕರ ರಾಠೋಡ ಸೇರಿದಂತೆ ಸಂಬಂಧಪಟ್ಟ ಜೆಇ, ಎಇಇ ಮತ್ತು ಗುತ್ತಿಗೆದಾರರು ಸೆರಿಕೊಂಡು ತಾಲೂಕು ಪಂಚಾಯತ್ ಅನುದಾನ‌ ₹1.76 ಕೋಟಿಯನ್ನು ದುರ್ಬಳಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೀಗೆ ಅವ್ಯವಹಾರ ಮಾಡಿರುವಂತಹ ಕಾಮಗಾರಿಗಳನ್ನು ಕುರಿತು ತನಿಖೆ ಮಾಡಿ ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕೂಡಲೇ ಸೇವೆಯಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

“2023-24ನೇ ಸಾಲಿನ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಲವಾರು ಅನುದಾನಗಳನ್ನು ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಮತ್ತು ರಿಪೇರಿಗೆ ಸುಮಾರು ₹81,55,444‌ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸುಮಾರು ₹22,87,666 ಹಾಗೂ ಗ್ರಂಥಾಲಯ ಅಭಿವೃದ್ಧಿಗೆ ₹24,87,666 ಮತ್ತು ಕೂಸಿನ ಮನೆ ಶಿಶುಪಾಲನಾ ಅಭಿವೃದ್ಧಿಗೆ ₹16,50,000 ಸೇರಿದಂತೆ ಇತರೆ ವಲಯ ಅಭಿವೃದ್ಧಿ, ಅಂಗವಿಕಲ ಕಲ್ಯಾಣಕ್ಕಾಗಿ ಹಣವನ್ನು ಮಿಸಲಿಟ್ಟು ಗ್ರಾಮಗಳ ಅಭಿವೃದ್ಧಿಗೆ ಕೊಟ್ಯಾಂತರ ರೂಪಾಯಿ ವೆಚ್ಚ ಮಾಡಬೇಕಾಗಿತ್ತು.

“ಅಭಿವೃದ್ಧಿಗೆ ಖರ್ಚು ಮಾಡಬೇಕಾದ ತಾಲೂಕು ಪಂಚಾಯತ್ ಅನುದಾನ ಯೋಜನೆ 2023-24ನೇ ಸಾಲಿನ ಅ‌ನಿರ್ಬಂಧಿತ ಅಭಿವೃದ್ಧಿ ಅನುದಾನದ ಕ್ರೀಯಾ ಯೋಜನೆಯಲ್ಲಿ ಒಟ್ಟು ತಾಲೂಕಿನ ವ್ಯಾಪ್ತಿಗೆ ಬರುವ 111 ಕಾಮಾಗಾರಿಗಳಲ್ಲಿ ಯಾವುದೇ ಕಾಮಾಗಾರಿಯೂ ಸಂಪೂರ್ಣವಾಗಿಲ್ಲ. ಅಂದಾಜು ಪತ್ರಿಕೆ ಪ್ರಕಾರ ಕಾಮಗಾರಿ ಮಾಡದೆ ಕಳಪೆ ಮಟ್ಟದಿಂದ ಹಾಗೂ ಕಾಮಗಾರಿ ಅರ್ಧಂಬರ್ಧವಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

“ಈ ಅವ್ಯವಹಾರ ಮಾಡಿರುವ ಹಣವನ್ನು ಸರ್ಕಾರಕ್ಕೆ ಮರಳಿ ಕಟ್ಟಿಸಬೇಕು. ಒಂದು ವೇಳೆ ಈ ಅವ್ಯವಹಾರವನ್ನು ತನಿಖೆ ಮಾಡುವಲ್ಲಿ ವಿಳಂಬ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ರಾಘವೇಂದ್ರ ಎಸ್‌ ಹೂವಿನಭಾವಿ, ಬಸವರಾಜ ಸೈದಕನೊರ್, ಸುನೀಲ ತ್ರಿಪಾಠಿ, ದೆವೀಂದ್ರಪ್ಪ ಕಟ್ಟಿಮನಿ, ಖತಲಪ್ಪ ಬಸಪ್ಪನೊರ್, ರಮೇಶ ಕುಡ್ಡಳ್ಳಿ, ವೀರಶೇಟ್ಟಿ ಎಚ್ ಡಿ, ಮಾರುತಿ ತೇಗಲತಿಪ್ಪಿ, ರಾಜಕುಮಾರ ದೋಟಿಕೋಳ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...